ಕುಮಟಾ : ಸಾಹಿತ್ಯ ಪರಿಷತ್ತು ನೂರಾರು ವರ್ಷಗಳ ಇತಿಹಾಸ ಹೊಂದಿದ್ದು ಕನ್ನಡ ಕಟ್ಟುವ ಕೆಲಸದಲ್ಲಿ ಮುಂಚೂಣಿಯಲ್ಲಿದೆ ಎಂದು ಸಾಹಿತಿ ಶ್ರೀಧರ ಬಳಗಾರ ಹೇಳಿದರು. ಇತ್ತೀಚೆಗೆ ಕುಮಟಾ ತಾಲೂಕಾ ಕನ್ನಡ ಸಾಹಿತ್ಯ ಪರಿಷತ್ತಿನ ಸೇವಾ ದೀಕ್ಷಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಸಾಹಿತ್ಯರಚನೆಯ ನಿರಂತರ ಓದು ಮತ್ತು ಬರವಣಿಗೆ ಮೂಲಕ ಸಿದ್ದಿಸುವುದು. ಪರಿಷತ್ತು ಬೆಳೆದು ಬಂದ ಮಾರ್ಗವನ್ನು ಸುದೀರ್ಘವಾಗಿ ವಿವರಿಸಿ,ಹಿಂದಿನ ರೋಹಿದಾಸ ನಾಯಕರ ಕಾಲದ ಸಾಹಿತ್ಯ ಪರಿಷತ್ತನ್ನು ನೆನಪಿಸುತ್ತ ನೂತನ ಅಧ್ಯಕ್ಷರಿಗೆ ಒಂದಿಷ್ಟು ಕಿವಿ ಮಾತನಾಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಬಿ.ಎನ್.ವಾಸರೆ ಮಾತನಾಡಿ, ಪರಿಷತ್ತು ಯಾವುದೇ ಕನ್ನಡ ಪರ ಕೆಲಸಗಳಿಗೆ ಹಾಗೂ ಕನ್ನಡ ಕಟ್ಟುವ ಕೆಲಸದಲ್ಲಿ ತಾಲೂಕಿನಲ್ಲಿರುವ ವಿವಿಧ ಸಂಘಟನೆಗಳು ಒಂದಾಗಿ ಕೆಲಸ ಮಾಡುವ ಅನಿವಾರ್ಯತೆ ನಮ್ಮೆದುರಿಗಿದೆ. ಪರಿಷತ್ತು ಯಾವುದೇ ಜಾತಿ-ಮತ-ಪಂಥ ಗಳಿಗೆ ಮಣೆ ಹಾಕದೆ ಜಾತ್ಯತೀತ ನೆಲೆಯಲ್ಲಿ ಕನ್ನಡ ಪರ ಚಟುವಟಿಕೆಯನ್ನು ಹಮ್ಮಿಕೊಳ್ಳಲಾಗಿದೆ. ಜಿಲ್ಲೆಯ ಸಾಹಿತಿಗಳನ್ನು ಗೌರವಿಸಿ, ಅವರ ಸಾಹಿತ್ಯ ಕೃತಿಗಳ ಮೂಲಕ ಅವರನ್ನು ಪರಿಚಯಿಸಿಕೊಳ್ಳಬೇಕಾದ ಅಗತ್ಯತೆ ನಮ್ಮೆದುರಿಗಿದೆ ಎಂದರು. ಎಲ್ಲಾ ಸದಸ್ಯರು ಒಂದಾಗಿ ದುಡಿಯಬೇಕಾದ ಅನಿವಾರ್ಯತೆ ನಮ್ಮ ಎದುರಿಗಿದೆ .ಕನ್ನಡ ಕಟ್ಟುವ ಕೆಲಸದಲ್ಲಿ ಎಲ್ಲಾ ಮನಸ್ಸುಗಳು ಒಂದಾಗಿ ದುಡಿಯಬೇಕಾದ ಕಾಲಘಟ್ಟದಲ್ಲಿ ನಾವಿದ್ದೇವೆ ಎಂದರು.
ಕ್ಷೇತ್ರ ಶಿಕ್ಷಣಾಧಿಕಾರಿ ಆರ್.ಎಲ್.ಭಟ್ಟ ಮಾತನಾಡಿ, ಮಕ್ಕಳಲ್ಲಿ ಸಾಹಿತ್ಯ ಕೃತಿಗಳನ್ನು ಓದುವ ಮೂಲಕ ಅವರಲ್ಲಿ ನಾಡು-ನುಡಿಯ ಬಗ್ಗೆ ಅಭಿಮಾನ ಮೂಡಿಸಬೇಕು ಎಂದರು. ಜಿಲ್ಲಾ ಕಸಾಪ ಗೌರವ ಕಾರ್ಯದರ್ಶಿ ಪಿ.ಆರ್.ನಾಯ್ಕ ಮಾತನಾಡಿ, ಕನ್ನಡ ಕಟ್ಟುವ ಕೆಲಸದಲ್ಲಿ ಎಲ್ಲರೂ ಕೈ ಜೋಡಿಸಿಬೇಕು ಎಂದರು. ವಿದ್ಯಾರ್ಥಿ ಜೀವನದಲ್ಲಿಯೇ ಓದುವುದರ ಮೂಲಕ ಸಾಹಿತ್ಯದ ಬಗ್ಗೆ ಆಸಕ್ತಿ ಮೂಡಿಸುವ ಕೆಲಸ ಪರಿಷತ್ತಿನ ಕಾರ್ಯ ಚಟುವಟಿಕೆಯಾಗಿ ರೂಪಿಸಲಾಗುವುದೆಂದು ಎಂದರು.
ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಆನಂದು ಗಾಂವಕರ, ನಿಕಟಪೂರ್ವ ಅಧ್ಯಕ್ಷ ಡಾಕ್ಟರ್ ಶ್ರೀಧರ್ ಉಪ್ಪಿನ ಗಣಪತಿ,ನೌಕರರ ಸಂಘದ ಅಧ್ಯಕ್ಷ ಬಿ.ಡಿ. ನಾಯ್ಕ, ಜಿಲ್ಲಾ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ರೋಹಿದಾಸ ನಾಯಕ ಮಾತನಾಡಿದರು.
ವೇದಿಕೆಯಲ್ಲಿ ಜಿಲ್ಲಾ ಕಸಾಪ ಸದಸ್ಯ ಪಿ.ಎಂ.ಮುಕ್ರಿ ಉಪಸ್ಥಿತರಿದ್ದರು. ಪ್ರಾರಂಭದಲ್ಲಿ ಶಾಲಾ ಮಕ್ಕಳಿಂದ ನಾಡಗೀತೆಯೊಂದಿಗೆ ಪ್ರಾರಂಭಿಸಲಾಯಿತು. ಕಸಾಪ ತಾಲೂಕಾ ಘಟಕದ ಅಧ್ಯಕ್ಷ ಸುಬ್ಬಯ್ಯ ನಾಯ್ಕ ಸ್ವಾಗತಿಸಿದರು. ಕೋಶಾಧ್ಯಕ್ಷ ಪ್ರದೀಪ್ ನಾಯಕ ವಂದಿಸಿದರು. ಗೌರವ ಕಾರ್ಯದರ್ಶಿ ವನ್ನಳ್ಳಿ ಗಿರಿ ಕಾರ್ಯಕ್ರಮ ನಿರೂಪಿಸಿದರು. ಕಾರ್ಯದರ್ಶಿ ಪ್ರಮೋದ ನಾಯ್ಕ ನೂತನ ಪದಾಧಿಕಾರಿಗಳನ್ನು ಪರಿಚಯಿಸಿದರು.
ಇದೇ ಸಂದರ್ಭದಲ್ಲಿ ತಾಲೂಕಾ ಘಟಕ ಅಧ್ಯಕ್ಷರು ಜಿಲ್ಲಾಧ್ಯಕ್ಷರಾದ ಬಿ. ಎನ್. ವಾಸರೆಯವರನ್ನು ಸನ್ಮಾನಿಸಲಾಯಿತು. ಆಮೆಚೂರಿ ಕಬ್ಬಡಿ ಅಸೋಸಿಯನ್ ಅಧ್ಯಕ್ಷರಾದ ಸೂರಜ ನಾಯ್ಕ ಸೋನಿಯವರು ಆಗಮಿಸಿ, ಜಿಲ್ಲಾ ಮತ್ತು ತಾಲೂಕು ಘಟಕದ ಅಧ್ಯಕ್ಷರನ್ನು ಸನ್ಮಾನಿಸಿ ಗೌರವಿಸಿದರು.