ಕುಮಟಾ: ತಾಲೂಕಿನ ರಾಷ್ಟೀಯ ಹೆದ್ದಾರಿ ತಂಡ್ರಕುಳಿ ಬಳಿ ಅನಾನಸ್ ಸಾಗಿರುತ್ತಿದ್ದ ಕಂಟೇನರ್ ಲಾರಿಯೊಂದು ರಸ್ತೆಯಿಂದ ಪಕ್ಕದ ಅಡಿಕೆ ತೋಟಕ್ಕೆ ಉರುಳಿಬಿದ್ದ ಘಟನೆ ನಡೆದಿದೆ. ಅಪಘಾತದಿಂದಾಗಿ ಲಾರಿ ಪಲ್ಟಿಯಾದ ರಭಸಕ್ಕೆ ಬೆಂಕಿ ಕಾಣಿಸಿಕೊಂಡಿದ್ದು, ಲಾರಿ ಹೊತ್ತಿ ಉರಿದಿದೆ. ಕುಮಟಾ ಕಡೆಯಿಂದ ಕಾರವಾರ ಕಡೆಗೆ ಲಾರಿ ತೆರಳುತ್ತಿತ್ತು ಎನ್ನಲಾಗಿದೆ. ಅಗ್ನಿಶಾಮಕ ಸಿಬ್ಬಂದಿ ಹರಸಾಹಸ ಪಟ್ಟು ಬೆಂಕಿ ನಂದಿಸಿದ್ದಾರೆ. ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಿಂದ ಅಡಿಕೆ ತೋಟಕ್ಕೆ ಉರುಳಿಬಿದ್ದಿದೆ. ಅಲ್ಲೆ ಪಕ್ಕದಲ್ಲೇ ಮನೆ ಇದ್ದು ಸ್ವಲ್ಪದರಲ್ಲೇ ಭಾರೀ ಅನಾಹುತ ತಪ್ಪಿದೆ. 

RELATED ARTICLES  ಶಿಷ್ಯಭಕ್ತರ ಸಡಗರ ಸಂಭ್ರಮದ ನಡುವೆ ಶ್ರೀಗಳ 49ನೇ ವರ್ಧಂತ್ಯುತ್ಸವ : ಸತ್ಕಾರ್ಯಗಳಿಂದ ಜೀವನ ಸಾರ್ಥಕ: ರಾಘವೇಶ್ವರ ಶ್ರೀ