ಭಟ್ಕಳ: ಕರ್ನಾಟಕದಲ್ಲಿ ಮುಂದಿನ ವಿಧಾನಸಭಾ ಚುನಾವಣೆಗೆ 50 ಕ್ಷೇತ್ರಗಳಲ್ಲಿ ಸಾಧು- ಸಂತರು ಸ್ಪರ್ಧಿಸಲಿದ್ದಾರೆ ಎಂದು ನಾಮಧಾರಿ ಕುಲಗುರುಗಳಾದ, ಉಜಿರೆ ಶ್ರೀರಾಮ ಕ್ಷೇತ್ರದ ಮಠಾಧೀಶ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಘೋಷಿಸಿದ್ದಾರೆ. ಭಟ್ಕಳದಲ್ಲಿ ನಡೆಯುತ್ತಿರುವ ಶ್ರೀಕ್ಷೇತ್ರ ಸಾರದಹೊಳೆ ಹಳೆಕೋಟೆ ಹನುಮಂತ ದೇವರ  ಸಭಾ ಕಾರ್ಯಕ್ರಮದಲ್ಲಿ ಶ್ರೀಗಳು ಈ ರೀತಿಯ ಹೇಳಿಕೆ ನೀಡಿದ್ದಾರೆ. ರಾಮರಾಜ್ಯದ ಪರಿಕಲ್ಪನೆಯಲ್ಲಿ ಹೊಸ ಸಂಸ್ಥೆಯೊಂದನ್ನು ಹುಟ್ಟು ಹಾಕುತ್ತೇವೆ ಎಂದೂ ಶ್ರೀಗಳು ಹೇಳಿದ್ದಾರೆ.

ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ, ಶಾಸಕ ಸುನೀಲ್ ನಾಯ್ಕ, ಮಾಜಿ ಶಾಸಕರಾದ ಜೆ.ಡಿ.ನಾಯ್ಕ, ಆರ್.ಎನ್.ನಾಯ್ಕ ಇತರರ ಉಪಸ್ಥಿತಿಯಲ್ಲಿ ಮಾತನಾಡಿದ ಅವರು, ಮುಂದಿನ ಚುನಾವಣೆಯಲ್ಲಿ ಭಟ್ಕಳದಲ್ಲೇ ಬ್ರಹ್ಮಾನಂದರು ಈ ಪ್ರಯೋಗ ಮಾಡುತ್ತಾರೆ. ಚುನಾವಣೆ ಪ್ರಚಾರಕ್ಕೆ ನೀವ್ಯಾರು ಬೇಡ, ನನ್ನ 5 ಲಕ್ಷ ನಾಗಾಸಾಧುಗಳು ಬರುತ್ತಾರೆ ಎಂದರು.

RELATED ARTICLES  ಕಳಪೆಯಾಗಿದೆ ಆಸ್ಪತ್ರೆ ಕಟ್ಟಡ, ಸರಿಪಡಿಸುವಂತೆ ಮನವಿ ಸಲ್ಲಿಕೆ

ಜನಪ್ರತಿನಿಧಿಗಳು ಪ್ರಜೆಗಳನ್ನ ತಮ್ಮ ಮಕ್ಕಳಂತೆ ಕಾಣುವ ಕೆಲಸವಾಗಬೇಕು ಅದಕ್ಕೆ ನಾವು ಸನ್ಯಾಸಿಗಳು ತಯಾರಾಗಿದ್ದೇವೆ. ನಮಗೆ ಆದಿತ್ಯನಾಥರ ಪ್ರೇರಣೆ ಸಿಕ್ಕಿದೆ ಎಂದರು. ನಾವು ಇಡೀ ದೇಶವನ್ನು ಸುತ್ತುವ ಸಂತರು. ನಮ್ಮದು ಒಂದು ಜುನಾಕಾರವಿದೆ. ಸುಮಾರು 5 ಲಕ್ಷ ಸಾಧು- ಸಂತರುಗಳಲ್ಲಿ ನಾನೂ ಒಬ್ಬ. ನಾವು ಎರಡು- ಮೂರು ತಿಂಗಳಿಗೆ ಕುಳಿತು ಮಾತನಾಡುತ್ತೇವೆ. ಈ ರಾಜ್ಯಾಂಗದ ವ್ಯವಸ್ಥೆ ದಿಕ್ಕು ತಪ್ಪುತ್ತಿದೆ ಎಂಬ ಕಳವಳ ವ್ಯಕ್ತಪಡಿಸಿದ‌ ಅವರು ವಿಧಾನಸಭೆಯಲ್ಲಿ ಮಾರ್ಕೆಟ್‌ನಲ್ಲಿ ಗಲಾಟೆ ಆದಂತೆ ಆಗುತ್ತದೆ. ಎಷ್ಟೋ ಸಲ ನಮ್ಮ ವಿಧಾನಸಭಾಧ್ಯಕ್ಷರಾದವರ ಪರಿಸ್ಥಿತಿ ನೋಡಿದಾಗ ಬೇಸರವಾಗುತ್ತದೆ. ಅದನ್ನು ನೋಡಿದರೆ ಸಂವಿಧಾನ ಇದೆಯೋ ಇಲ್ಲವೋ ಗೊತ್ತಾಗುವುದಿಲ್ಲ, ರಾಜ್ಯಾಂಗದ ಪರಿಕಲ್ಪನೆ ಇದೆಯೇ ಇಲ್ಲವೋ ಗೊತ್ತಾಗುವುದಿಲ್ಲ. ಸಮಗ್ರ ಬದಲಾವಣೆ ಆಗಬೇಕು. ಹೀಗಾಗಿ ನಾವು ಸನ್ಯಾಸಿಗಳು ತಯಾರಾಗಿದ್ದೇವೆ ಎಂದರು.

RELATED ARTICLES  "ಹಣತೆ ಬೆಳಗಿದ ನಮ್ಮೆಲ್ಲ ಆಲೋಚನೆ ಬೆಳಕಿನ ಸುತ್ತವೇ ಇದೆ’‘ಹಣತೆ ಬೆಳಕಿನಲ್ಲಿ ದೀಪಾವಳಿ ಕವಿಗೋಷ್ಠಿ’ ಉದ್ಘಾಟಿಸಿದ ಗೋವಿಂದ ಹೆಗಡೆ