ತುಮಕೂರು: ಸಿದ್ಧಗಂಗಾ ಶ್ರೀಗಳ ಆರೋಗ್ಯದಲ್ಲಿ ಏರುಪೇರಾಗಿದ್ದು ಸ್ವಾಮಿಜೀಗಳನ್ನು ಬೆಂಗಳೂರು ಬಿಜಿಎಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸ್ವಾಮೀಜಿಗಳು ಶೀತದಿಂದ ಗಂಟಲು ನೋವಿನ ಸಮಸ್ಯೆ, ಅಜೀರ್ಣ ಸಮಸ್ಯೆಯಿಂದ ಬಳಲುತ್ತಿದ್ದರು. ಬುಧವಾರ ತಡರಾತ್ರಿ ಶ್ರೀಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು ಚಿಕಿತ್ಸೆ ನೀಡಲಾಗುತ್ತಿದೆ.
ಶ್ರೀಗಳ ಆರೋಗ್ಯ ಈಗ ಸಹಜ ಸ್ಥಿತಿಗೆ ಬಂದಿದ್ದು, ಗೆಲುವಾಗಿದ್ದಾರೆ ಎಂದು ಮಠದ ಸಿಬ್ಬಂದಿಗಳು ತಿಳಿಸಿದರು. ಶ್ರೀಗಳ ಅನಾರೋಗ್ಯ ಸುದ್ದಿ ತಿಳಿದು ಜಿಲ್ಲಾಧಿಕಾರಿ ಕೆ.ಪಿ.ಮೋಹನ್ ರಾಜ್ ಹಾಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ದಿವ್ಯ ಗೋಪಿನಾಥ್ ಭೇಟಿನೀಡಿ ಶ್ರೀಗಳ ಆರೋಗ್ಯವನ್ನ ವಿಚಾರಿಸಿದರು.