ಕಾರವಾರ : ಮೊಬೈಲ್ ಗೀಳು ಇಂದಿನ ಮಕ್ಕಳು ಹಾಗೂ ಯುವ ಜನತೆಯ ಪ್ರಾಣಕ್ಕೇ ಕುತ್ತು ತರುತ್ತಿದ್ದು, ಅತಿಯಾದ ಮೊಬೈಲ್ ಬಳಕೆ ಮಾಡುತ್ತಿದ್ದ ಯುವತಿಗೆ ಮೊಬೈಲ್ ಬಳಕೆ ಮಾಡದಂತೆ ಬುದ್ಧಿವಾದ ಹೇಳಿದ್ದಕ್ಕೆ ಮುನಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಹಬ್ಬುವಾಡದಲ್ಲಿ ನಡೆದಿದೆ ಎಂದು ವರದಿಯಾಗಿದೆ.

RELATED ARTICLES  'ಲೈಕ್, ಕಮೆಂಟ್, ಶೇರ್ ಮಾಡಿ' ಎಂದು ಬೆಗ್ ಮಾಡುವ ತಂತ್ರಕ್ಕೆ ಫೇಸ್ ಬುಕ್ ಬ್ರೇಕ್

ಮೂಲತಃ ಸಿದ್ದಾಪುರದ, ಕಾರವಾರದ ಹಬ್ಬುವಾಡದಲ್ಲಿ ಬಾಡಿಗೆ ಮನೆಯೊಂದರಲ್ಲಿ ವಾಸವಾಗಿದ್ದ ಮೇಘ ಆತ್ಮಹತ್ಯೆ ಮಾಡಿಕೊಂಡ ಯುವತಿ. ಪ್ಯಾರಾಮೆಡಿಕ್ ಕೋರ್ಸ್ ಮುಗಿಸಿಕೊಂಡು ಮನೆಯಲ್ಲಿದ್ದ ಯುವತಿ ಮೊಬೈಲ್ ಅತಿಯಾಗಿ ಬಳಕೆ ಮಾಡುವುದನ್ನು ಗಮನಿಸಿದ ಪಾಲಕರು ಬೈದು ಬುದ್ದಿವಾದ ಹೇಳಿದ್ದಾರೆ. ಆದರೆ ಇದನ್ನೆ ಮನಸ್ಸಿಗೆ ಹಚ್ಚಿಕೊಂಡು ಯುವತಿ ಮನೆಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಈ ಬಗ್ಗೆ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED ARTICLES  ವಿದ್ಯುತ್ ಶಾರ್ಟ ಸರ್ಕ್ಯೂಟ್ ನಿಂದ ಹೊತ್ತಿ ಉರಿದ ಮನೆ : ಪ್ರಮಾಣದ ಆಸ್ತಿ ಪಾಸ್ತಿ ಹಾನಿ