ಭಟ್ಕಳ: ಮುರುಡೇಶ್ವರ ಪಿಯು ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ಯುವತಿಯೊಬ್ಬಳು ಯಾವುದೋ ವಿಷಯವನ್ನು ಮನಸ್ಸಿಗೆ ಹಚ್ಚಿಕೊಂಡು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿ ಕೊಂಡಿರುವ ಘಟನೆ ವರದಿಯಾಗಿದೆ.
ಈಕೆ ಯಾವುದೋ ವಿಷಯವನ್ನು ಮನಸ್ಸಿಗೆ ಹಚ್ಚಿಕೊಂಡು ಮನೆಯಲ್ಲಿ ಯಾರು ಇಲ್ಲದ ವೇಳೆ ತಮ್ಮ ತೋಟದ ಮೇಲ್ಭಾಗದಲ್ಲಿರುವ ಬಾವಿಯಲ್ಲಿ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಶೇಡಗೇರಿ ಗೋಳಿ ಕುಂಬ್ರಿಯಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ಯುವತಿ ದೀಪಿಕಾ ಗೋವಿಂದ ನಾಯ್ಕ ಎಂದು ತಿಳಿದುಬಂದಿದೆ. ಯುವತಿ ಮೃತ ದೇಹವನ್ನು ಭಟ್ಕಳ ಸರ್ಕಾರಿ ಆಸ್ಪತ್ರೆಗೆ ತಂದು ಮರಣೋತ್ತರ ಪರೀಕ್ಷೆ ನಡೆಸಿ ಕುಟುಂಬಕ್ಕೆ ಹಸ್ತಾಂತರಿಸಿದ್ದಾರೆ. ಈ ಕುರಿತು ಮುರುಡೇಶ್ವರ ಪೊಲೀಸ ಠಾಣೆಯಲ್ಲಿ ಮೃತ ಯುವತಿಯ ತಂದೆ ಪ್ರಕರಣ ದಾಖಲಿದ್ದಾರೆ.