ಕುಮಟಾ : ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣಗಳು ಹೆಚ್ಚುತ್ತಲಿದ್ದು, ಕುಮಟಾದಲ್ಲಿಯೂ ಅಪ್ರಾಪ್ತ ವಿದ್ಯಾರ್ಥಿನಿಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಪ್ರಕರಣಕ್ಕೆ ಸಂಬoಧಿಸಿದoತೆ ಮೂವರು ಯುವಕರನ್ನು ಕುಮಟಾ ಪೊಲೀಸರು ಬಂಧಿಸಿದ ಬಗ್ಗೆ ವರದಿಯಾಗಿದೆ.
ತಾಲೂಕಿನ ಪಿಯು ಕಾಲೇಜ್ ವೊಂದರ ಅಪ್ರಾಪ್ತ ವಿದ್ಯಾರ್ಥಿನಿಯ ಮೇಲೆ ಲೈಂಗಿಕ ದೌರ್ಜನ್ಯ ವೆಸಗಿದ ನಾಲ್ವರು ಯುವಕರ ವಿರುದ್ಧ ಪ್ರಕರಣ ದಾಖಲಾಗಿತ್ತು, ಈ ಪ್ರಕರಣದ ತನಿಖೆ ನಡೆಸಿದ ಪೊಲೀಸರು, ಆರೋಪಿತರಾದ ಗಣೇಶ ಗೌಡ, ಮಂಜುನಾಥ ಗೌಡ ಹಾಗೂ ಹೊನ್ನಾವರದ ರಾಮಚಂದ್ರ ನಾಯ್ಕ ಮೂವರನ್ನು ಬಂಧಿಸಿ ಜಿಲ್ಲಾ ನ್ಯಾಯಾಲಕ್ಕೆ ಹಾಜರುಪಡಿಸಿದ್ದಾರೆ ಎನ್ನಲಾಗಿದೆ.
ಈ ನಾಲ್ವರು ಸೇರಿ ಅಪ್ರಾಪ್ತ ಯುವತಿ ಮೇಲೆ ಪದೇ ಪದೇ ಲೈಂಗಿಕ ದೌರ್ಜನ್ಯ ಎಸಗಿದ್ದು, ಪರಿಣಾಮ ಯುವತಿ ಗರ್ಭಿಣಿಯಾಗಿದ್ದಳು. ಬಳಿಕ ಯುವತಿ ಕುಮಟಾ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಈ ಹಿನ್ನಲೆಯಲ್ಲಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದರು. ಸಂತ್ರಸ್ತೆ ಯುವತಿಯನ್ನು ಕಾರವಾರದ ಸ್ವೀಕಾರ ಕೇಂದ್ರಕ್ಕೆ ಸಾಗಿಸಲಾಗಿದೆ. ಇನ್ನೊಬ್ಬ ಆರೋಪಿ ಪರಾರಿಯಾಗಿದ್ದು, ಪೊಲೀಸರು ಈತನ ಪತ್ತೆಗೆ ಶೋಧ ಆರಂಭಿಸಿದ್ದಾರೆ.