ಬೆಂಗಳೂರು : ಬಿಸಿಲಿನ ಬೇಗೆಯಿಂದ ತತ್ತರಿಸುತ್ತಿದ್ದ ಜನರಿಗೆ ಮಳೆಯ ಸಿಂಚನವಾಗಿದೆ. ಅರಬ್ಬಿ ಸಮುದ್ರದಲ್ಲಿ ಎದ್ದಿರುವ ಚಂಡಮಾರುತದ ಪರಿಣಾಮ ಬಹುತೇಕ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿ ಭಾಗದಲ್ಲಿ ಅಬ್ಬರದ ಮಳೆ ಸುರಿಯುತ್ತಿದೆ. ಜಿಲ್ಲೆಯ ಭಟ್ಕಳ, ಕುಮಟಾ,ಹೊನ್ನಾವರ ,ಅಂಕೋಲ ಭಾಗದಲ್ಲಿ ಅಬ್ಬರದ ಮಳೆ ಸುರಿಯುತಿದ್ದು ಕರಾವಳಿ ಭಾಗದ ಕಡಲು ಕ್ಷುದ್ರವಾಗಿದೆ.

RELATED ARTICLES  ತಂಡ್ರಕುಳಿಯಲ್ಲಿ ಮನೆಯ ಮೇಲೆ ಎರಗಿದ ಬಂಡೆಗಲ್ಲು.

ಕಳೆದ ಎರಡು ದಿನದಿಂದಲೂ ಕೆಂಡದಂತಿದ್ದ ಕರಾವಳಿ ಭಾಗದಲ್ಲಿ ಇಂದು ಮಳೆಯ ಆರ್ಭಟ ತಂಪಾಗಿಸಿದೆ. ಅರಬ್ಬಿ ಸಮುದ್ರದಲ್ಲಿ ಆಳೆತ್ತರದ ಅಲೆಗಳು ಏಳುತಿದ್ದು ಆಳ ಸಮುದ್ರದ ಮೀನುಗಾರಿಕೆಯನ್ನು ಬಂದ್ ಮಾಡಲಾಗಿದೆ.ಕರಾವಳಿ ಭಾಗದಲ್ಲಿ ಇನ್ನೂ ಎರಡು ದಿನ ಮಳೆಯಾಗಲಿದೆ. ಮಲೆನಾಡು ಭಾಗವಾದ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಬೆಂಗಳೂರು ಕರಾವಳಿ ಭಾಗದ ಮಂಗಳೂರು,ಉಡುಪಿ,ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆ ಹೆಚ್ಚಿನ ಪ್ರಮಾಣದಲ್ಲಿ ಆಗಲಿದೆ ಎಂದು ತಿಳಿಸಿದ್ದು ಯಲ್ಲೋ ಅಲರ್ಟ ಘೋಷಿಸಿದೆ.

RELATED ARTICLES  ಅಕ್ರಮ ‌ಮದ್ಯ ಸಂಗ್ರಹ: ಅಧಿಕಾರಿಗಳಿಂದ 833.10 ಲೀ.ಮದ್ಯ ವಶ.