ಹೊನ್ನಾವರ: ತಾಲೂಕಿನ ಹಳದಿಪುರ ಸನಿಹ ಅಗ್ರಹಾರದಲ್ಲಿ ಕಾರು ಗುದ್ದಿದ ಪರಿಣಾಮ ಪಾದಚಾರಿ ಸ್ಥಳದಲ್ಲೇ ಮೃತಪಟ್ಟ ಘಟನೆ ಬುಧವಾರ ನಡೆದಿದೆ. ಮೃತನನ್ನು ಅಗ್ರಹಾರದ ನಿವಾಸಿ ಮಹೇಶ್ ಹಳದಿಪುರ ಎಂದು ಗುರುತಿಸಲಾಗಿದೆ.
ಹೊನ್ನಾವರ ಕಡೆಯಿಂದ ಕುಮಟಾ ಕಡೆ ಹೋಗುತ್ತಿದ್ದ ಕಾರು ಚಾಲಕನ ಅಜಾಗರೂಕತೆ ಚಾಲನೆಯಿಂದ ರಸ್ತೆಯ ಪಕ್ಕದಲ್ಲೇ ನಡೆದುಕೊಂಡು ಹೋಗುತ್ತಿದ್ದ ಪಾದಚಾರಿಗೆ ಗುದ್ದಿದೆ. ಪರಿಣಾಮ ಸ್ಥಳದಲ್ಲೇ ಪಾದಾಚಾರಿ ಮೃತಪಟ್ಟಿದ್ದಾನೆ ಎನ್ನಲಾಗಿದೆ. ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.