ಕುಮಟಾ: ಜನರಿಗೆ ತೊಂದರೆ ನೀಡುತ್ತಿರುವ ಹಾಗೂ ಜನತೆಯ ಪ್ರಾಣಕ್ಕೆ ಕುತ್ತು ತಂದಿರುವ ಕಳಪೆ ಒಳ ಚರಂಡಿ ಕಾಮಗಾರಿಯನ್ನು ತಕ್ಷಣ ನಿಲ್ಲಿಸುವಂತೆ ಮಾಜಿ ಶಾಸಕ ದಿನಕರ ಶೆಟ್ಟಿ ಆಗ್ರಹಿಸಿದರು. ಅವರು ಕುಮಟಾದಲ್ಲಿ ನಡೆದ ಒಳಚರಂಡಿ ಅಧಿಕಾರಿಗಳ ಸಭೆಯಲ್ಲಿ ಹಾಜರಿದ್ದು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ತಕ್ಷಣವೇ ಕಾಮಗಾರಿ ನಿಲ್ಲಿಸಿ ಆಗಿರುವ ದೋಷ ಸರಿಪಡಿಸಬೇಕು ಎಂದು ಆಗ್ರಹಿಸಿದರು.

RELATED ARTICLES  ಇಂದಿನ(ದಿ-05/02/2019) ಉತ್ತರಕನ್ನಡ ಜಿಲ್ಲೆಯ ಪ್ರಮುಖ ತಾಲೂಕುಗಳ ಅಡಿಕೆ ಧಾರಣೆ

 

ಶಾಸಕರು ಹಾಗೂ ಜಿಲ್ಲಾಧಿಕಾರಿಗಳ ಮಾತಿಗೆ ಬೆಲೆಕೊಡದೇ ತಮಗೆ ಅನಿಸಿದಂತೆ ಕೆಲಸ ಮಾಡುತ್ತಿರುವ ಅಧಿಕಾರಿಗಳ ಬಗ್ಗೆ ಬೇಸರ ವ್ಯಕ್ತಪಡಿಸಿದ ಅವರು. ಸಭೆಯಲ್ಲಿ ಜಿಲಳಾಧಿಕಾರಿ ಅಥವಾ ಸಹಾಯಕ ಆಯುಕ್ತರು ಇಲ್ಲದೇ ಇರುವ ಬಗ್ಗೆ ಆಕ್ರೋಶ ವ್ಯಕ್ತಪಡಿಸಿ ಸಭೆಯಿಂದ ಹೊರನಡೆದರು.

RELATED ARTICLES  ಪರಿಸರ ಉಳಿಸುವುದೇ ನಮ್ಮ ಗುರಿ : ಸ್ವರ್ಣವಲ್ಲೀ ಶ್ರೀ

 

ಈ ಸಂದರ್ಭದಲ್ಲಿ ಸಾರ್ವಜನಿಕರು, ವಿವಿಧ ಇಲಾಖಾ ಅಧಿಕಾರಿಗಳು ಹಾಜರಿದ್ದರು.