ಶಿರಸಿ: ನಗರದ ಐದು ರಸ್ತೆ ವೃತ್ತದ ಬಳಿ ರಸ್ತೆಯ ಸಮೀಪ ಕುಳಿತುಕೊಂಡಿದ್ದ ವ್ಯಕ್ತಿ ಏಕಾಏಕಿ ರಸ್ತೆಗೆ ಬಂದ ಪರಿಣಾಮ ಲಾರಿ ಹರಿದು, ಲಾರಿಯ ಹಿಂಬದಿಯ ಚಕ್ರಕ್ಕೆ ಸಿಲುಕಿ ಪಾದಚಾರಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ. ಮೃತ ವ್ಯಕ್ತಿ ಹೆಗಡೆ ಕಟ್ಟಾ ನಿವಾಸಿ ಎಂದು ತಿಳಿದುಬಂದಿದೆ. ಘಟನೆಯಿಂದ ಸುತ್ತಲ ಜನರು ಓಡಿಬಂದು ನೋಡಿದರೆ ಆ ದೃಷ್ಯ ಮನ ಕಲಕುವಂತಿತ್ತು ಎಂದಿದ್ದಾರೆ.
ಸುದ್ದಿ ತಿಳಿದ ತಕ್ಷಣ ಪೊಲೀಸರು ಸ್ಥಳಕ್ಕೆ ಆಗಮಿಸಿ, ಪರಿಶೀಲನೆ ನಡೆಸಿದ್ದಾರೆ. ಸ್ಥಳದಲ್ಲಿ ಜನ ಸೇರುತ್ತಿದ್ದಂತೆ ಲಾರಿ ಚಾಲಕ ಲಾರಿ ಬಿಟ್ಟು ಪರಾರಿಯಾಗಿದ್ದಾನೆ ಎನ್ನಲಾಗಿದೆ. ಶಿರಸಿ ನಗರ ಠಾಣೆಯಲ್ಲಿ ದೂರು ದಾಖಲಾಗಿದೆ.