ಕಾರವಾರ: ಜ್ವರದಿಂದ ಆಸ್ಪತ್ರೆಗೆ ತೆರಳಿದ್ದ ನವ ವಿವಾಹಿತೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡು ಗುಣಮುಖರಾಗಿದ್ದರು. ಇದಾದ ಬಳಿಕ ನಿನ್ನೆ ಮಧ್ಯಾಹ್ನದ ಮತ್ತೆ ಜ್ವರ, ತಲೆನೋವು ಕಾಣಿಸಿಕೊಂಡ ಹಿನ್ನಲೆ ನಗರದ ಕಾಜುಭಾಗ್‌ನಲ್ಲಿರುವ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು, ಆದರೆ ಅದಾವ ಕಾರಣವೋ ತಿಳಿಯದು ಹಲವಾರು ಕನಸ್ಸುಗಳನ್ನ ಹೊತ್ತು ಹೊಸ ಜೀವನ ಆರಂಭಿಸಿದ್ದಾಕೆಗೆ ವಿಧಿ ಬೇರೆ ದಾರಿ ತೋರಿಸಿದೆ. ಜ್ವರ ಎಂದು ಆಸ್ಪತ್ರೆಗೆ ದಾಖಲಾಗಿದ್ದ ನವವಿವಾಹಿತೆ ಪ್ರಾಣ ಕಳೆದುಕೊಳ್ಳುವಂತಾಗಿದ್ದು ಮನೆಯವರಿಗೆ ಬರಸಿಡಿಲು ಬಡಿದಂತಾಗಿದೆ. ಕೇವಲ 24 ವರ್ಷದ ವಿವಾಹಿತೆ ಸನಾ ಮಾಂಜ್ರೇಕರ್ ಮೃತ ದುರ್ದೈವಿ ಎನ್ನಲಾಗಿದೆ.

RELATED ARTICLES  ಬಿರುಸಿನ ಪ್ರಚಾರ ನಡೆಸಿದ ಸೂರಜ್ ನಾಯ್ಕ ಸೋನಿ.

ಯುವತಿ ಸಾವಿಗೆ ವೈದ್ಯರೇ ಕಾರಣ ಎಂದು ಆರೋಪಿಸಿ ಆಸ್ಪತ್ರೆ ಎದುರು ಜಮಾಯಿಸಿ ಆಕ್ರೋಶ ವ್ಯಕ್ತಪಡಿಸಿದೆ. ತಾಲ್ಲೂಕಿನ ಕಿನ್ನರ ಗ್ರಾಮದ ನಿವಾಸಿಯಾಗಿದ್ದ 24 ವರ್ಷದ ಯುವತಿ ಸನಾಗೆ ಕಡವಾಡ ಗ್ರಾಮದ ನಿವಾಸಿ ಸ್ವಪ್ನಿಲ್ ಮಾಂಜ್ರೇಕರ್ ಎಂಬಾತನೊoದಿಗೆ ಮೇ.10 ರಂದು ವಿವಾಹವಾಗಿತ್ತು. ಕಳೆದ 8 ದಿನಗಳ ಹಿಂದೆ ಜ್ವರ ಕಾಣಿಸಿಕೊಂಡಿತ್ತು, ಹೀಗಾಗಿ ಆಸ್ಪತ್ರೆಗೆ ದಾಖಲಿಸಲಾಯಿತು.

ಅಲ್ಲಿ ಆಕೆಗೆ ಗ್ಲುಕೋಸ್ ಏರಿಸಿದ್ದು ರಾತ್ರಿ ವೇಳೆಗೆ ಕೊಂಚ ಚೇತರಿಸಿಕೊಂಡಿದ್ದಳು. ಇದಾದ ಬಳಿಕ ಊಟ ಮಾಡಲು ಮುಂದಾಗಿದ್ದಾಗ ಆಸ್ಪತ್ರೆಯ ಶುಶ್ರೂಷಕಿ ಸನಾಳಿಗೆ 4 ಇಂಜೆಕ್ಷನ್ ನೀಡಿದ್ದರು. ಆದರೆ ಇಂಜೆಕ್ಷನ್ ನೀಡಿದ ಕೆಲವೇ ಹೊತ್ತಿನಲ್ಲಿ ಆಕೆಗೆ ಹೊಟ್ಟೆಉರಿ ಕಾಣಿಸಿಕೊಂಡಿದ್ದು ಉಸಿರಾಟದಲ್ಲೂ ಏರುಪೇರಾಗಿತ್ತು. ಕೂಡಲೇ ಪರಿಶೀಲಿಸಿದ ಆಸ್ಪತ್ರೆ ಸಿಬ್ಬಂದಿ ಐಸಿಯು ವ್ಯವಸ್ಥೆ ಇಲ್ಲದ ಹಿನ್ನಲೆ ಸರ್ಕಾರಿ ಆಸ್ಪತ್ರೆಗೆ ಕೊಂಡೊಯ್ಯುವoತೆ ತಿಳಿಸಿದ್ದಾರೆ. ಅಂಬ್ಯುಲೆನ್ಸ್ ಮೂಲಕ ಸನಾಳನ್ನ ಸರ್ಕಾರಿ ಆಸ್ಪತ್ರೆಗೆ ಸ್ಥಳಾಂತರಿಸಿದ್ದು ಅಲ್ಲಿನ ವೈದ್ಯರು ಚಿಕಿತ್ಸೆ ನೀಡಲು ಪ್ರಯತ್ನಿಸಿದರಾದರೂ ಚಿಕಿತ್ಸೆ ಫಲಕಾರಿಯಾಗದೇ ಬೆಳಗಿನ ಜಾವ 4 ಗಂಟೆಗೆ ಕೊನೆಯುಸಿರೆಳೆದಿದ್ದಾಳೆ.

RELATED ARTICLES  ಬಾಲಕಿಯ ಸಮಯ ಪ್ರಜ್ಞೆ : ತಪ್ಪಿದ ಭಾರೀ ಅನಾಹುತ.

ಕುಟುಂಬದವರು ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯದಿಂದಲೇ ನವವಿವಾಹಿತೆ ಸಾವನ್ನಪ್ಪಿದ್ದಾಗಿ ಆರೋಪಿಸಿ ದೂರು ನೀಡಿದ್ದಾರೆ. ಯುವತಿ ಸಾವಿಗೆ ನ್ಯಾಯ ಒದಗಿಸಿಕೊಡುವಂತೆ ಪೊಲೀಸರಿಗೆ ಮನವಿ ಮಾಡಿದ್ದಾರೆ.