ಬೆಂಗಳೂರು: ರಾಜ್ಯಕ್ಕೆ ಮುಂಗಾರು ಮಳೆ ಪ್ರವೇಶವಾಗಿದ್ದರಿಂದ, ಮುಂದಿನ 3-4 ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ. ನೈರುತ್ಯ ಭಾಗದಿಂದ ಮುಂಗಾರು ಪ್ರವೇಶ ಹಿನ್ನೆಲೆಯಿಂದಾಗಿ ಬಂಗಾಳಕೊಲ್ಲಿಯಲ್ಲಿ ವಾಯು ಭಾರ ಕುಸಿತ ಉಂಟಾಗಿದೆ. ದಕ್ಷಿಣ ಒಳನಾಡು, ಕರಾವಳಿಯ ಬಹುತೇಕ ಜಿಲ್ಲೆಗಳಲ್ಲಿ ಹೆಚ್ಚು ಮಳೆಯ ಸಾಧ್ಯತೆ ಇದೆ. ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಮಳೆಯಾಗುವ ಸೂಚನೆ ಇದೆ ಎಂದು ಇಲಾಖೆ ಎಚ್ಚರಿಕೆ ನೀಡಿದೆ. ಅಲ್ಲದೇ ಗುಡುಗು, ಸಿಡಿಲು, ಮಿಂಚಿನೊಂದಿಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.