ಕಾರವಾರ: ಅಕ್ರಮವಾಗಿ ಗೋವಾ ಮದ್ಯವನ್ನು ಸಾಗಣೆ ಮಾಡುತ್ತಿದ್ದ ನಾಲ್ವರು ಆರೋಪಿಗಳಲ್ಲಿ ಒಬ್ಬರನ್ನು ಬಂಧಿಸಿ, ₨ 28 ಸಾವಿರ ಮೌಲ್ಯದ ಗೋವಾ ಮದ್ಯ ಹಾಗೂ ಒಂದು ಬೈಕ್‌ ಅನ್ನು ಚಿತ್ತಾಕುಲ ಪೊಲೀಸರು ತಾಲ್ಲೂಕಿನ ಮುಡಗೇರಿಯಲ್ಲಿ ವಶಕ್ಕೆ ಪಡೆದಿದ್ದಾರೆ.

RELATED ARTICLES  ರೋಟರಾಕ್ಟ್ ಅಂತರ್ ಜಿಲ್ಲಾ ಡೆಕ್ಸ್ಟೆರಿಯಸ್ ಲೀಗ್' ಕ್ರಿಕೆಟ್ ಪಂದ್ಯಾವಳಿಯಲ್ಲಿ ಸಾಧನೆ.

 
ಖಚಿತ ಮಾಹಿತಿ ಮೇರೆಗೆ ನಡೆದ ಈ ದಾಳಿಯಲ್ಲಿ ಆರೋಪಿ ಹೋಟೆಗಾಳಿಯ ಕೃಷ್ಣ ಗಜನ್ಕರ್ ಎಂಬುವವನನ್ನು ಬಂಧಿಸಲಾಗಿದೆ. ಇನ್ನುಳಿದ ಪ್ರಮೋದ ಪಡುವಳಕರ್, ಘಾಡಸಾಯಿ ಸತೀಶ್ ನಾಯ್ಕ, ವೈಂಗಿಣಿಯ ಮಧು ಗಾಂವಕರ್ ಎಂಬುವವರು ಪರಾರಿಯಾಗಿದ್ದಾರೆ ಎಂದು ಚಿತ್ತಾಕುಲ ಠಾಣೆಯ ಪೊಲೀಸರು ಮಾಹಿತಿ ನೀಡಿದರು.

RELATED ARTICLES  ಮಿರ್ಜಾನಿನ ಬಿಜಿಎಸ್ ಕೇಂದ್ರೀಯ ವಿದ್ಯಾಲಯದಲ್ಲಿ ರಾಷ್ಟ್ರೀಯ ಏಕತಾ ದಿನಾಚರಣೆ