ಶಿಕ್ಷಕರ ಮತಕ್ಷೇತ್ರದ ಮತ ಎಣಿಕೆ ಪ್ರಕ್ರಿಯೆ ನಡೆದಿದ್ದು, ಪಶ್ಚಿಮ ಶಿಕ್ಷಕರ ಮತಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಬಸವರಾಜ ಹೊರಟ್ಟಿ ಅವರು ಗೆಲವು ಸಾಧಿಸುವ ಮೂಲಕ 8ನೇ ಬಾರಿಗೆ ಮೇಲ್ಮನೆ ಪ್ರವೇಶಿಸಿದ್ದಾರೆ. ಗೆಲುವಿನ ಗುರಿಗೆ ಬೇಕಾಗಿದ್ದ ಮತಗಳನ್ನು ಸುಲಭವಾಗಿ ಪಡೆದ ಹೊರಟ್ಟಿ ಅವರು 7500 ಕ್ಕೂ ಹೆಚ್ಚು ಮತಗಳನ್ನು ಪಡೆದಿದ್ದಾರೆ. ಪಶ್ಚಿಮ ಶಿಕ್ಷಕರ ಕ್ಷೇತ್ರದಲ್ಲಿ ಜೆಡಿಎಸ್ ತೊರೆದು ಬಿಜೆಪಿ ಸೇರ್ಪಡೆಗೊಂಡಿದ್ದ 76 ರ ಹರೆಯದ ಹಿರಿಯ ರಾಜಕಾರಣಿ ಬಸವರಾಜ ಹೊರಟ್ಟಿ ಅವರ ವಿರುದ್ಧ ಜೆಡಿಎಸ್ ನ ಶ್ರೀಶೈಲ ಗಡದಿನ್ನಿ, ಕಾಂಗ್ರೆಸ್ ಅಭ್ಯರ್ಥಿ ಬಸವರಾಜ ಗುರಿಕಾರ ಕಣದಲ್ಲಿದ್ದರು.

RELATED ARTICLES  ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ.

ಗೆಲುವಿನ ಗುರಿಗೆ ಬೇಕಾಗಿದ್ದ ಮತಗಳನ್ನು ಸುಲಭವಾಗಿ ಪಡೆದ ಹೊರಟ್ಟಿ ಅವರು 9266 ಮತಗಳನ್ನು ಪಡೆದಿದ್ದಾರೆ.ಕಾಂಗ್ರೆಸ್ ಅಭ್ಯರ್ಥಿ ಬಸವರಾಜ ಗುರಿಕಾರ ಅವರು 4597 ಮತಗಳನ್ನು ಪಡೆದರೆ, ಜೆಡಿಎಸ್ ನ ಶ್ರೀಶೈಲ ಗಡದಿನ್ನಿ, 273 ಮತಗಳನ್ನು ಪಡೆದಿದ್ದಾರೆ.

RELATED ARTICLES  ಕೆಲಸ ಮುಗಿಸಿ ಕೈ ಕಾಲು ತೊಳೆಯಲು ಬಂದವನನ್ನು ಹೊತ್ತೊಯ್ದ ಮೊಸಳೆ.

ಚುನಾವಣಾ ಆಯೋಗದಿಂದ ಅಧಿಕೃತ ಘೋಷಣೆ ಮಾತ್ರ ಬಾಕಿ ಉಳಿದಿದೆ. ಪ್ರಥಮ ಪ್ರಾಶಸ್ತ್ಯದ ಮತಗಳಲ್ಲೇ ಗೆದ್ದು ಬೀಗಿದ ಬಸವರಾಜ ಹೊರಟ್ಟಿ ಗೆಲುವಿನ ನಗು ಬೀರಿದ್ದಾರೆ.

ವಿಧಾನಪರಿಷತ್ ನ 2 ಶಿಕ್ಷಕರು ಹಾಗೂ 2 ಪದವೀಧರರ ಕ್ಷೇತ್ರಕ್ಕೆ ಸೋಮವಾರ ನಡೆದ ಚುನಾವಣೆಯ ಮತ ಎಣಿಕೆ ಇಂದು ಬೆಳಗ್ಗೆ ಆರಂಭಗೊಂಡಿದ್ದು, ಸಂಜೆಯೊಳಗೆ ನಾಲ್ಕು ಕ್ಷೇತ್ರಗಳ ಫಲಿತಾಂಶ ಹೊರಬೀಳಲಿದೆ.