ಕಾರವಾರ: ಗೋವಾದಿಂದ ಅಂಕೋಲಾ ಕಡೆ ತೆರಳುತ್ತಿದ್ದ ಕಾರಿನಲ್ಲಿ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಗೋವಾ ಮದ್ಯವನ್ನು ನಗರದ ಬಿಲ್ಟ್ ಸರ್ಕಲ್ ಬಳಿ ಜಪ್ತಿಪಡಿಸಿಕೊಂಡಿರುವ ಪೊಲೀಸರು, ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಮಾಜಾಳಿಯ ಗೋಟ್ನೇಭಾಗದ ಜ್ಞಾನೇಶ್ವರ ಕಿಂದಳಕರ್, ಚೆಂಡಿಯಾ ಗಾಂವಕರ್ ವಾಡಾದ ಪ್ರವೀಣ ದೇಸಾಯಿ ವಶದಲ್ಲಿರುವವರು. ಮಾಜಾಳಿ ಚೆಕ್‌ಪೋಸ್ಟ್ ಮೂಲಕ ಕಾರಿನಲ್ಲಿ ಗೋವಾ ಮದ್ಯ ಸಾಗಾಟ ಮಾಡುತ್ತಿದ್ದಾಗ ಬಿಲ್ಟ್ ಸರ್ಕಲ್ ಬಳಿ ತಡೆದು ಪೊಲೀಸರು ತಪಾಸಣೆ ನಡೆಸಿದಾಗ ಸುಮಾರು 21 ಸಾವಿರ ಮೌಲ್ಯದ ಗೋವಾ ಮದ್ಯ ಪತ್ತೆಯಾಗಿದೆ. ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದ ನಗರ ಠಾಣಾ ಪೊಲೀಸರು, ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸುಮನ ಪೆನ್ನೇಕರ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಎಸ್.ಬದರಿನಾಥ, ಪೊಲೀಸ್ ನಿರೀಕ್ಷಕ ಸಿದ್ದಪ್ಪ ಎಸ್.ಬೀಳಗಿ ಅವರ ಮಾರ್ಗದರ್ಶನದಲ್ಲಿ, ಪಿಎಸ್‌ಐಗಳಾದ ಶ್ರೀಕೃಷ್ಣ ಗೌಡ, ಸಂತೋಷ್‌ಕುಮಾರ್ ಎಂ. ಹಾಗೂ ಸಿಬ್ಬಂದಿ ಮಧುಕುಮಾರ್ ಎಸ್., ಚಂದನ್ ಆರ್., ವೆಂಕಟರಮಣ ನಾಯ್ಕ್, ಗಣೇಶ್ ಕುರಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.