ಕಾರವಾರದಲ್ಲಿ ಬೆಳಂಬೆಳಗ್ಗೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿ ಈರ್ವರು ಅಧಿಕಾರಿಗಳಿಗೆ ಸಂಬಂಧಿಸಿದ ದಾಖಲೆಗಳನ್ನ ಪರಿಶೀಲನೆ ನಡೆಸಿದ್ದಾರೆ.
ಕಾರವಾರದ ಪ್ರಧಾನಮಂತ್ರಿ ಗ್ರಾಮ ಸಡಕ್ ವಿಭಾಗದ ಸಹಾಯಕ ಇಂಜಿನಿಯರ್ ರಾಜೀವ್ ನಾಯ್ಕ ಎಂಬುವವರ ಮನೆಯ ಮೇಲೆ ದಾಳಿ ನಡೆಸಲಾಗಿದೆ. ಕಾರವಾರ ನಗರದ ಬೃಂದಾವನ ಅಪಾರ್ಟ ಮೆಂಟ್ ನಲ್ಲಿ ಮನೆ ರಾಜೀವ್, ಕುಮಟಾ ಮೂಲದವರು. ಇನ್ನು ಜಿಲ್ಲಾ ನೋಂದಣಾಧಿಕಾರಿ ಪಿ.ಎಸ್.ಶ್ರೀಧರ್ ಅವರಿಗೆ ಸೇರಿದ ಜಿಲ್ಲಾ ನೋಂದಣಾಧಿಕಾರಿ ಕಚೇರಿಯಲ್ಲಿ ಅಧಿಕಾರಿಗಳಿಂದ ದಾಖಲೆ ಪರಿಶೀಲನೆ ನಡೆಸಲಾಗಿದ್ದು, ಕಾರವಾರ ನಗರದ ಹಬ್ಬುವಾಡದಲ್ಲಿನ ಮನೆ ಮೇಲೆ ತಪಾಸಣೆ ನಡೆಸಿದ್ದಾರೆ. ಕಚೇರಿ ಬಳಿ ಎಸಿಬಿ ಅಧಿಕಾರಿಗಳ ತಂಡದಿಂದ ದಾಖಲೆ ಪರಿಶೀಲನೆ ನಡೆಸಿದ್ದು, ರಾಮನಗರದ ಎಸಿಬಿ ತಂಡದಿಂದ ದಾಖಲೆಗಳ ಪರಿಶೀಲನೆ ನಡೆಸಲಾಗಿದೆ.
ತುಮಕೂರು ಎಸಿಬಿ ಡಿವೈಎಸ್ಪಿ ಮಲ್ಲಿಕಾರ್ಜುನ ಚುಕ್ಕಿ ನೇತೃತ್ವದ ತಂಡ ಈ ದಾಳಿ ನಡೆಸಿತ್ತು. ಆದಾಯ ಮೀರಿ ಅಕ್ರಮವಾಗಿ ಆಸ್ತಿ ಗಳಿಕೆ ಮಾಡಿರುವ ಆರೋಪ ಹಿನ್ನೆಲೆಯಲ್ಲಿ ಎಸಿಬಿ ಶಾಸಕ ಭ್ರಷ್ಟ ಅಧಿಕಾರಿಗಳಿಗೆ ಸಂಬಂಧಪಟ್ಟ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.