ಕುಮಟಾ; ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಹೊಲನಗದ್ದೆ ಕಡ್ಲೆಯ ವಿದ್ಯಾರ್ಥಿ ಪ್ರಣವ ಈಶ್ವರ ನಾಯಕ (೧೮) ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅನುತ್ತೀರ್ಣರಾದ ಕಾರಣ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಶನಿವಾರ ಮಧ್ಯಾಹ್ನ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಹೇಳಲಾಗಿದೆ.
ಡಾ.ಎ.ವಿ ಬಾಳಿಗಾ ಕಲಾ ಮತ್ತು ವಿಜ್ಞಾನ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವಿಜ್ಞಾನದಲ್ಲಿ ವ್ಯಾಸಂಗ ಮಾಡಿದ್ದ ಈತ ಅನುತ್ತೀರ್ಣನಾಗಿದ್ದಕ್ಕೆ ಮನನೊಂದು ಈ ನಿರ್ಧಾರ ಕೈಗೊಂಡಿದ್ದಾನೆ. ಈತನ ತಂದೆ ರಿಕ್ಷಾ ಚಾಲಕರಾಗಿದ್ದಾರೆ. ಬಡಕುಟುಂಬದ ವಿದ್ಯಾರ್ಥಿಯ ಆತ್ಮಹತ್ಯೆಗೆ ಅನೇಕರು ಕಂಬನಿ ಮಿಡಿದಿದ್ದಾರೆ. ಕುಮಟಾ ಪಿಎಸ್‌ಐ ನವೀನ ನಾಯ್ಕ ತನಿಖೆ ಕೈಗೊಂಡಿದ್ದಾರೆ.