ಕಾರವಾರ- ಶನಿವಾರ ಚಿತ್ರದುರ್ಗದ ಬಾಪೂಜಿ ಶಿಕ್ಷಣ ವಿದ್ಯಾಲಯದ ಸಭಾಂಗಣದಲ್ಲಿ ಕರ್ನಾಟಕ ಪ್ರೆಸ್ ಕ್ಲಬ್ (ರಿ) ಬೆಂಗಳೂರು ನೇತೃತ್ವದಲ್ಲಿ ನಡೆದ ಪತ್ರಕರ್ತರ ರಾಜ್ಯ ಮಟ್ಟದ ಸಭೆ ಮತ್ತು ಕರ್ನಾಟಕ ಪ್ರೆಸ್ ಕ್ಲಬ್ ನ ರಾಜ್ಯ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮದಲ್ಲಿ ವಿಶ್ವದರ್ಶನ ಕನ್ನಡ ದಿನಪತ್ರಿಕೆ ಉತ್ತರ ಕನ್ನಡ ಜಿಲ್ಲಾ ವರದಿಗಾರರು, ಕರ್ನಾಟಕ ಪ್ರೆಸ್ ಕ್ಲಬ್ ನ ಉತ್ತರ ಕನ್ನಡ ಜಿಲ್ಲಾ ಅಧ್ಯಕ್ಷರು, ರಾಜ್ಯ ಕಾರ್ಯಕಾರಿಣಿ ಸಮಿತಿ ನಿರ್ದೇಶಕರು,ಅಂಬಿಗ ನ್ಯೂಸ್ ನ ಉಪಸಂಪಾದಕರು ಆದ ಪತ್ರಕರ್ತ ಕುಮಾರ ನಾಯ್ಕ ಭಟ್ಕಳ ಅವರ ಪ್ರತಿಕಾ ಮಾಧ್ಯಮದಲ್ಲಿ ಸಾಮಾಜಿಕ ಕಳಕಳಿಯ ಹೋರಾಟವನ್ನು ಗುರುತಿಸಿ ಕರ್ನಾಟಕ ಪ್ರೆಸ್ ಕ್ಲಬ್ ನ ರಾಜ್ಯ ಅಧ್ಯಕ್ಷರು ಮತ್ತು ರಾಜ್ಯ ಸಮಿತಿಯವರು ಶಾಲು ಹೊದಿಸಿ, ಪೇಟ ತೊಡಿಸಿ, ಸ್ಮರಣಿಕೆ ನೀಡಿ ಸನ್ಮಾನಿಸಿದರು.

RELATED ARTICLES  ವಿಷ್ಣುಗುಪ್ತ ವಿಶ್ವವಿದ್ಯಾಪೀಠಕ್ಕೆ ಶಿಕ್ಷಣ ಸಚಿವರ ಭೇಟಿ : ಶಿಕ್ಷಣದಲ್ಲಿ ಭಾರತೀಯತೆ ಇಂದಿನ ಅಗತ್ಯ ಎಂದ ಬಿ.ಸಿ ನಾಗೇಶ್

ಇದೆ ಸಂದರ್ಭದಲ್ಲಿ ಕರ್ನಾಟಕ ಪ್ರೆಸ್ ಕ್ಲಬ್ ನ ಉತ್ತರ ಕನ್ನಡ ಜಿಲ್ಲಾ ಪ್ರಧಾನ ಕಾರ್ಯದರ್ಶಿ , ಭ್ರಷ್ಟರ ಬೇಟೆ ಪತ್ರಿಕೆ ಶಿರಸಿ ತಾಲೂಕ ವರದಿಗಾರರು ಹಿರಿಯ ಪತ್ರಕರ್ತರ ಆದ ಸೀತಾರಾಮ ಆಚಾರ್ಯ ಶಿರಸಿ ಇವರನ್ನು ಕೂಡ ಕರ್ನಾಟಕ ಪ್ರೆಸ್ ಕ್ಲಬ್ ನ ರಾಜ್ಯ ಸಮಿತಿಯ ಪದಾಧಿಕಾರಿಗಳು ಶಾಲು ಹೊದಿಸಿ ,ಪೇಟ ತೊಡಿಸಿ ಸನ್ಮಾನಿಸಿದರು. ನಂತರ ಮಾತನಾಡಿದ ಕರ್ನಾಟಕ ಪ್ರೆಸ್ ಕ್ಲಬ್ ನ ರಾಜ್ಯ ಅಧ್ಯಕ್ಷರಾದ ರಮೇಶ್ ಅವರು ಕರಾವಳಿಯ ಕರ್ನಾಟಕ ಭಾಗದಲ್ಲಿ ಪತ್ರಕರ್ತರ ಸಮಸ್ಯೆಗಳಿಗೆ ಹೋರಾಟ ಮಾಡುವುದರ ಮೂಲಕ ಸರ್ಕಾರದ ಗಮನ ಸೆಳೆವುವಂತೆ ಸಲಹೆ ನೀಡಿದರು.ಈ ಸಂದರ್ಭದಲ್ಲಿ ಕರ್ನಾಟಕ ಪ್ರೆಸ್ ಕ್ಲಬ್ ನ ರಾಜ್ಯ ಸಲಹಾ ಸಮಿತಿ ಅಧ್ಯಕ್ಷರಾದ ಡಾ.ಎಸ್.ಎಸ್ ಪಾಟೀಲ್ , ರಾಜ್ಯ ಉಪಾಧ್ಯಕ್ಷರು , ಚಿತ್ರದುರ್ಗ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷರಾದ ಕೆ.ಎಂ. ಶಿವಸ್ವಾಮಿ ,ಕರ್ನಾಟಕ ಪ್ರೆಸ್ ಕ್ಲಬ್ ನ ರಾಜ್ಯ ಕೋಶಾಧ್ಯಕ್ಷರಾದ ನಾಗರಾಜ್ , ರಾಜ್ಯ ಕಾರ್ಯಾಧ್ಯಕ್ಷರಾದ ಖಜಾಹುಸೇನ್, ಯಲ್ಲಪ್ಪ ಕಟ್ಟಿಕಾರ ಬೆಳಗಾವಿ, ರಾಜ್ಯ ಪ್ರಧಾನ ಕಾರ್ಯದರ್ಶಿ ದಯಾನಂದ ಮುತದವರು ಉಪಸ್ಥಿತರಿದ್ದರು.

RELATED ARTICLES  ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ‌ ರಕ್ಷಣೆ.