ತರಕಾರಿ ಬೆಲೆ, ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಿಂದ ಕಂಗೆಟ್ಟಿರುವ ಜನತೆಗೆ ಸರ್ಕಾರ ಮತ್ತೊಂದು ಶಾಕ್ ನೀಡಿದೆ. ಜುಲೈ 1ರಿಂದ ವಿದ್ಯುತ್ ದರ ಏರಿಕೆಯಾಗಲಿದೆ ಎಂದು ತಿಳಿದುಬಂದಿದೆ. ವಿದ್ಯುತ್ ದರ 19 ರೂಪಾಯಿಯಿಂದ 31 ರವರೆಗೆ ಏರಿಕೆಯಾಗಲಿದ್ದು, ಜುಲೈ 1ರಿಂದಲೇ ಇದು ಜಾರಿಗೆ ಬರಲಿದೆ. ಪ್ರತಿ ತಿಂಗಳು 100 ಯೂನಿಟ್ ಹಾಗೂ ಅದಕ್ಕೂ ಹೆಚ್ಚು ಬಳಸುವ ಗ್ರಾಹಕರು ಹೆಚ್ಚುವರಿಯಾಗಿ 19ರಿಂದ 31ರವರೆಗೆ ಪಾವತಿಸಬೇಕಾಗುತ್ತದೆ. ಈ ದರ ಆಯಾ ವಿದ್ಯುತ್ ವಿತರಣಾ ಕಂಪನಿಗಳ ಮೇಲೆ ಅವಲಂಬನೆಯಾಗಿದೆ ಎನ್ನಲಾಗಿದೆ.
ಕಳೆದ 2 ವರ್ಷಗಳಲ್ಲಿ ಕಲ್ಲಿದ್ದಲು ದರ ಹೆಚ್ಚಳವಾಗಿರುವ ಕಾರಣ , ಕಲ್ಲಿದ್ದಲು ಖರೀದಿ ಮಾಡಿರುವ ವೆಚ್ಚವನ್ನು ಗ್ರಾಹಕರಿಂದ ಪಡೆಯಲು ಅವಕಾಶ ಕಲ್ಪಿಸುವಂತೆ ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋ (ಕೆಇಆರ್‌ಸಿ)ಕ್ಕೆ ಎಸ್ಕಾಂಗಳು (ಬೆಸ್ಕಾಂ, ಮೆಸ್ಕಾಂ, ಹೆಸ್ಕಾಂ, ಗೆಸ್ಕಾಂ, ಸೆಸ್ಕ್) ಪ್ರಸ್ತಾವ ಸಲ್ಲಿಸಿದ್ದವು. ಈ ಪ್ರಸ್ತಾನವನೆಯಲ್ಲಿ ಇಂಧನ ವೆಚ್ಚ ಹೊಂದಾಣಿಕೆ ಶುಲ್ಕವನ್ನು ಪ್ರತಿ ಯೂನಿಟ್‌ಗೆ 38ರಿಂದ 55 ರೂಪಾಯಿವರೆಗೆ ವಸೂಲಿ ಮಾಡಲು ಎಸ್ಕಾಂಗಳು ಕೋರಿದ್ದವು ಎಂದು ತಿಳಿದು ಬಂದಿದೆ.
ಶಾಖೋತ್ಪನ್ನ ವಿದ್ಯುತ್ ಘಟಕಗಳಲ್ಲಿ ಉತ್ಪಾದನೆಯ ವೆಚ್ಚ ಹೆಚ್ಚಾಗಿದ್ದರೆ, ಕಲ್ಲಿದ್ದಲು ಅಭಾವದಿಂದ ಹಾಗೂ ದರ ಹೆಚ್ಚಳವಾಗಿದೆ. ಇದ ಅಲ್ಲದೇ ಆರ್ಥಿಕವಾಗಿ ಎಸ್ಕಾಂಗಳು ನಷ್ಟದಲ್ಲಿರುವ ಕಾರಣ ತಾತ್ಕಾಲಿಕ ಮಟ್ಟಕ್ಕೆ ದರ ಹೆಚ್ಚು ಮಾಡಲಾಗಿದೆ. ಹೊರೆ ಕಡಿಮೆಯಾದ ಕೂಡಲೇ ಬೆಲೆಗಳು ವಾಪಸ್ ಯಥಾಸ್ಥಿತಿಗೆ ಬರುವುದಾಗಿಯೂ ಅವು ತಿಳಿಸಿವೆ ಎಂದು ವರದಿಯಾಗಿದೆ.