ಬೆಂಗಳೂರು : ಡೆತ್ ನೋಟ್ ಬರೆದು ಮಗುವನ್ನು ಕೊಂದು ತಾಯಿ ಆತ್ಮಹತ್ಯೆ ಮಾಡಿಕೊಂಡಿರುವ ಹೃದಯ ವಿದ್ರಾವಕ ಘಟನೆಯೊಂದು ಆರ್.ಆರ್.ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ ಎಂದು ತಿಳಿದುಬಂದಿದೆ. ದೀಪಾ(31 ವರ್ಷ) ಹಾಗೂ ಮೂರುವರೆ ವರ್ಷದ ಮಗು ರಿಯಾ ಮೃತಪಟ್ಟವರು ಎನ್ನಲಾಗಿದೆ.
ಬ್ರಹ್ಮಾವರ ಮೂಲದ ದೀಪಾ ಸಾಫ್ಟ್‌ವೇರ್ ಇಂಜಿನಿಯರ್ ಆಗಿರುವ ಆದರ್ಶ್ ಜೊತೆ 2017 ರಲ್ಲಿ ಮದುವೆಯಾಗಿದ್ದಳು. ವಿವಾಹದ ನಂತರ ಆರ್ ಆರ್ ನಗರದ ಮಂತ್ರಿ ಅಪಾರ್ಟ್ಮೆಂಟ್ ನಲ್ಲಿ ವಾಸವಾಗಿದ್ದರು ಎಂದು ತಿಳಿದುಬಂದಿದೆ.
ಕಳೆದ ಒಂದು ವಾರದಿಂದ ದೀಪಾಗೆ ಜ್ವರ ಹಾಗೂ ಹೊಟ್ಟೆ ನೋವಿನಿಂದ ಬಳಲುತಿದ್ದ ದೀಪಾ ಚಿಕಿತ್ಸೆ ಪಡೆದರೂ ಕಡಿಮೆಯಾಗಿರಲಿಲ್ಲ. ಇದರಿಂದ ಜಿಗುಪ್ಸೆಗೊಳಗಾಗಿದ್ದ ದೀಪಾ ನಿನ್ನೆ ರಾತ್ರಿ ಮೂರುವರೆ ವರ್ಷದ ರಿಯಾಳ ಕುತ್ತಿಗೆಗೆ ವೇಲ್ ಬಿಗಿದು ಕೊಂದ ಬಳಿಕ ತಾನು ಫ್ಯಾನಿಗೆ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ ಎನ್ನಲಾಗಿದೆ.
ಸಾಯುವ ಮುನ್ನ ಡೆತ್ ನೋಟ್ ನಲ್ಲಿ ” Nobody is responsible for it i just felt life is full of shits i am sorry mom and divya Love you shona” ಎಂದು ಬರೆದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನಲಾಗಿದೆ. ಈ ಮಾಹಿತಿ ಮೇರೆಗೆ ಆರ್ ಆರ್ ನಗರ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ ಎಂದು ವರದಿಯಾಗಿದೆ.