ಒಂದು ವಾರದಿಂದ ರಾಜ್ಯದ ಕರಾವಳಿ ಸೇರಿದಂತೆ ಬಹುತೇಕ ಜಿಲ್ಲೆಗಳಲ್ಲಿ ಭಾರೀ ಮಳೆ ಸುರಿಯುತ್ತಿದ್ದು,ಜುಲೈ 5ರವರೆಗೆ ಮುಂದುವರಿಯಲಿದೆ.ಕರಾವಳಿ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ ಎಂದು ತಿಳಿಸುಬಂದಿದೆ.ಕ ರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ನಿರಂತರ ಮಳೆಯಿಂದ ಜನ ಜೀವನ ಅಸ್ಥವ್ಯಸ್ಥಗೊಂಡಿದೆ ಎನ್ನಲಾಗಿದೆ.
ಇದರ ನಡುವೆ ಇನ್ನು ಮೂರು ದಿನಗಳ
ಕಾಲ, ಅಂದರೆ, ಜುಲೈ 5ರವರೆಗೆ ಧಾರಾಕಾರ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ ಎಂದು ತಿಳಿದುಬಂದಿದೆ. ಇಂದಿನಿಂದ ಜುಲೈ 5 ರವರೆಗೆ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದ್ದು, ಆರೆಂಜ್ ಅಲರ್ಟ್
ಘೋಷಿಸಲಾಗಿದೆ.ಉತ್ತರ ಕರ್ನಾಟಕದ ಬೀದರ್, ಕಲಬುರಗಿ, ಯಾದಗಿರಿ, ವಿಜಯಪುರ, ಬಾಗಲಕೋಟೆ, ಬೆಳಗಾವಿ, ಕೊಪ್ಪಳ, ಧಾರವಾಡ, ಹಾವೇರಿ ಜಿಲ್ಲೆಗಳಲ್ಲಿ ಇಂದೂ ಭಾರೀ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ವರದಿಯಾಗಿದೆ.