ಹೊನ್ನಾವರ : ನಿರ್ಮಲಾ ಹೆಗಡೆ ಕರ್ಕಿ ಇವರುನ್ನು ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ಜಿಲ್ಲೆಯ ಮಹಿಳಾ ಸಂಚಾಲಕಿಯಾಗಿ ನೇಮಕ ಮಾಡಲಾಗಿದೆ ಎಂದು ತಿಳಿದು ಬಂದಿದೆ.
ಸಂಘಟನೆಯ ರಾಜ್ಯಾಧ್ಯಕ್ಷರಾದ ಅಶೋಕ ಹಾರನಹಳ್ಳಿ ಅವರು ನೇಮಕಾತಿಯ ಆದೇಶ ಪ್ರತಿಯನ್ನು ಹಸ್ತಾಂತರಿಸಿದ್ದಾರೆ ಎನ್ನಲಾಗಿದೆ.
ವಿವಿಧ ಸಂಘ- ಸಂಸ್ಥೆ, ದೇವಸ್ಥಾನ, ಅಲ್ಲದೇ ಸಮಾಜಮುಖಿಯಾಗಿ ಗುರುತಿಸಿಕೊಂಡಿರುವ ಇವರು ಶ್ರೀರಾಮಚಂದ್ರಪುರ ಮಠದ
ವಿವಿಧ ಕಾರ್ಯಕ್ರಮದಲ್ಲಿ ಸೇವೆ ಸಲ್ಲಿಸುತ್ತಾ ಬಂದಿದ್ದರು. ಇವರು ಕೆವಿಜಿ ಬ್ಯಾಂಕ್ ಮ್ಯಾನೇಜರ್ ಆಗಿರುವ ಪಿ.ಎನ್. ಹೆಗಡೆ ಇವರ ಧರ್ಮಪತ್ನಿಯಾಗಿದ್ದಾರೆ ಎಂದು ವರದಿಯಾಗಿದೆ.