ಕಾರವಾರ: ಕಾರವಾರ ವೈದ್ಯಕೀಯ ವಿಜ್ಞಾನಗಳ ಮಹಾವಿದ್ಯಾಲಯದಲ್ಲಿ ಹೊಸದಾಗಿ ನಿರ್ಮಾಣಗೊಂಡಿರುವ ಅರವಳಿಕೆ ವಿಭಾಗ ಹಾಗೂ ನೋವು ನಿವಾರಣಾ ಘಟಕವನ್ನು ಸಂಸ್ಥೆಯ ನಿರ್ದೇಶಕ ಡಾ.ಗಜಾನನ ನಾಯಕ ಉದ್ಘಾಟಿಸಿದರು ಎಂದು ತಿಳಿದುಬಂದಿದೆ. ಉದ್ಘಾಟಿಸಿದ ನಂತರ ಮಾತನಾಡಿದ ಅವರು, ಸಂಸ್ಥೆಗೆ ಹೊಸದಾಗಿ ಸ್ನಾತ್ತಕೋತ್ತರ ವಿದ್ಯಾರ್ಥಿಗಳು ಪ್ರವೇಶ ಪಡೆದು ವಿದ್ಯಾರ್ಜನೆಯನ್ನು ಮಾಡುತ್ತಿದ್ದಾರೆ. ಇವರ ಕಲಿಕೆಯ ಹಿತದೃಷ್ಟಿಯಿಂದ ಹಾಗೂ ರೋಗಿಗಳ ಅನುಕೂಲಕ್ಕೆ ತಕ್ಕಂತೆ ವಿವಿಧ ಉನ್ನತ ಉಪಕರಣಗಳನ್ನು ಪಡೆಯಲಾಗಿದೆ. ಇದರಿಂದಾಗಿ ಜಿಲ್ಲೆಯ ಬೇರೆ ಬೇರೆ ಸ್ಥಳಗಳಿಂದ ಬರುವ ಗಂಭೀರ ಹಾಗೂ ಕ್ಲಿಷ್ಟಕರ ಶಸ್ತ್ರಚಿಕಿತ್ಸೆಯನ್ನು ನೆರವೇರಿಸುವಾಗ ಸೂಕ್ತವಾದ ಅರವಳಿಕೆಯನ್ನು ನೀಡಲು ಅನುಕೂಲವಾಗುತ್ತದೆ ಎಂದು ತಿಳಿಸಿದರು ಎನ್ನಲಾಗಿದೆ.

RELATED ARTICLES  ನನ್ನನ್ನು ಬೆಂಬಲಿಸಿದ ಜನತೆಗೆ ಧನ್ಯವಾದ ತಿಳಿಸಿದ ಸೂರಜ್ ನಾಯ್ಕ ಸೋನಿ.

ಇದೆ ಸಂದರ್ಭದಲ್ಲಿ ವೈದ್ಯಕೀಯ ಅಧೀಕ್ಷಕ ಡಾ.ಶಿವಾನಂದ ಕುಡ್ತರಕರ್ ಮಾತನಾಡಿ, ಆಸ್ಪತ್ರೆಗೆ ಇತ್ತೀಚಿನ ದಿನಗಳಲ್ಲಿ ರೋಗಿಗಳ ಸಂಖ್ಯೆ ಹೆಚ್ಚಾಗಿದೆ. ಗಂಭೀರ ಕಾಯಿಲೆಗಳನ್ನು ಹಾಗೂ ಶಸ್ತ್ರಚಿಕಿತ್ಸೆಗಳನ್ನು ನಮ್ಮ ಕ್ರಿಮ್ಸ್ ಆಸ್ಪತ್ರೆಯಲ್ಲಿ ನಡೆಸುತ್ತಿರುವುದು ಹೆಮ್ಮೆಯ ವಿಷಯ ಎಂದು ತಿಳಿಸಿದರು.

ಅರವಳಿಕೆ ವಿಭಾಗದ ಮುಖ್ಯಸ್ಥ ಡಾ.ಮಂಜುನಾಥ ಭಟ್ ರವರು ಮಾತನಾಡಿ ನೋವು ನಿವಾರಣಾ ಘಟಕದಲ್ಲಿ ತಜ್ಞ ಅರವಳಿಕೆ ವೈದ್ಯರು ಕ್ಯಾನ್ಸರ್ ಹಾಗೂ ಇನ್ನಿತರೆ ಬಹುದಿನಗಳಿಂದ ಇರುವ ಕಾಯಿಲೆಗಳಿಂದ ಉಂಟಾಗುವ ನೋವಿಗೆ ಸೂಕ್ತ ಚಿಕಿತ್ಸೆಯನ್ನು ಪಡೆದುಕೊಳ್ಳಬಹುದು ಎಂದು ತಿಳಿಸಿದರು ಎನ್ನಲಾಗಿದೆ.

RELATED ARTICLES  ಹಾಳಾದ ರಸ್ತೆ ಸರಿಪಡಿಸಿ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಟ್ಟ : ಹೆಗಡೆಯ ಗಣೇಶ ನಾಯ್ಕ

ಅಲ್ಲದೇ ಈ ಸಂದರ್ಭದಲ್ಲಿ ಪ್ರಾಂಶುಪಾಲರಾದ ಡಾ.ಶಿವಕುಮಾರ ಜಿ.ಎಲ್., ಅರವಳಿಕೆ ವಿಭಾಗದ ಎಲ್ಲ ಬೋಧಕ ವೈದ್ಯರು, ಶೂಶ್ರುಷಾಧ್ಯಕ್ಷಕಿ ಲಕ್ಷ್ಮಿ ಕೊನೆಸಾರ ಹಾಗೂ ಇತರೆ ಸಿಬ್ಬಂದಿ ಇದ್ದರು ಎಂದು ವರದಿಯಾಗಿದೆ.