ಉಡುಪಿ: ಕುಂದಾಪುರ ಕಡೆಯಿಂದ ಬೈಂದೂರಿನತ್ತ ಹೋಗುತ್ತಿದ್ದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಸಮುದ್ರಕ್ಕೆ ಉರುಳಿದ ಘಟನೆಯೊಂದು ಗಂಗೊಳ್ಳಿ ಠಾಣಾ ವ್ಯಾಪ್ತಿಯ ಮರವಂತೆ ಬೀಚ್‌ನ ಬಳಿ ನಡೆದಿದೆ ಎಂದು ತಿಳಿದುಬಂದಿದೆ. ಈ ಅಪಘಾತದಲ್ಲಿ ಕಾರಿನೊಳಗಿದ್ದ ನಾಲ್ವರ ಪೈಕಿ ಚಾಲಕ ಮೃತಪಟ್ಟಿದ್ದು, ಇನ್ನೋರ್ವ ನಾಪತ್ತೆಯಾಗಿದ್ದಾರೆ. ಇಬ್ಬರು ಗಾಯಗೊಂಡಿದ್ದು ಅವರನ್ನು ಆಸ್ಪತ್ರೆ ಸೇರಿದ್ದಾರೆ ಎನ್ನಲಾಗಿದೆ.
ಬೀಜಾಡಿಯ ಗೋಳಿಬೆಟ್ಟು ನಿವಾಸಿಯಾದ ವಿಲಾಸ್ ಮಾರ್ಬಲ್ ನ ಮಾಲಕ ರಮೇಶ್ ಆಚಾರ್ ನೇರಂಬಳ್ಳಿಯವರ ಪುತ್ರ ವಿರಾಜ್ ಆಚಾರ್ಯ ಸಾವನ್ನಪ್ಪಿದ ದುರ್ದೈವಿ ಎಂದು ಗುರುತಿಸಲಾಗಿದೆ.
ಇವರ ಸಹೋದರ ಸಂಬಂಧಿಗಳಾದ ಸಂದೇಶ್, ರೋಶನ್,ಕಾರ್ತಿಕ್ ಪೈಕಿ ರೋಶನ್ ಎಂಬವರು
ನಾಪತ್ತೆಯಾಗಿದ್ದು, ಸಮುದ್ರದಲ್ಲಿ ಕೊಚ್ಚಿ
ಹೋಗಿರುವ ಶಂಕೆ ವ್ಯಕ್ತವಾಗಿದೆ ಎನ್ನಲಾಗಿದೆ.
ಕಾರ್ತಿಕ್ ಹಾಗೂ ಸಂದೇಶ್ ಇವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಇವರನ್ನು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ವರದಿಯಾಗಿದೆ.