ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಗೋಕರ್ಣದ ಪುರಾಣ ಪ್ರಸಿದ್ಧ ಮಹಾಬಲೇಶ್ವರ ದೇವಸ್ಥಾನಕ್ಕೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಪತ್ನಿ ಚನ್ನಮ್ಮರವರು ಭೇಟಿ ನೀಡಿ ಪೂಜೆ ಸಲ್ಲಿಸಿದರು.
ಧಾರ್ಮಿಕ ಕಾರ್ಯಕ್ರಮದ ನಿಮಿತ್ತ ಕುಟುಂಬದೊಂದಿಗೆ ಗೋಕರ್ಣಕ್ಕೆ ಆಗಮಿಸಿದ್ದ ಅವರು ಮೊದಲು ಗಣಪತಿ ದೇವಸ್ಥಾನದಲ್ಲಿ ಅಭಿಷೇಕ ,ಪೂಜೆ ಸಲ್ಲಿಸಿ ನಂತರ ಮಹಾಬಲೇಶ್ವರ ದೇವಸ್ಥಾನದಲ್ಲಿ ಆತ್ಮಲಿಂಗಕ್ಕೆ ಪೂಜೆ ಸಲ್ಲಿಕೆ ಮಾಡಿದರು.