ಕಾರವಾರ:ನಗರದಲ್ಲಿ ವಿದ್ಯಾರ್ಥಿಗಳಿಂದ ಏಕ ಬಳಕೆ ಪ್ಲಾಸ್ಟಿಕ್ ನಿಷೇಧದ ಕುರಿತು ಜಾಗೃತಿ ಜಾಥಾ ನಡೆಯಿತು
ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷೆ ಸುಜಾತಾ ತಾಮ್ಪ ಹಾಗೂ ಉಪಾಧ್ಯಕ್ಷ ಪಿ.ಪಿ. ನಾಯ್ಕ ನಗರಸಭೆಯಿಂದ ಆರಂಭವಾದ ಜಾಥಾಕ್ಕೆ ಚಾಲನೆ ನೀಡಿದರು. ನಂತರ ನಗರದ ಎಂ.ಜಿ.ರೋಡ್, ಸವಿತಾ ಸರ್ಕಲ್ ಮಾರ್ಗವಾಗಿ ಕೋಡಿಭಾಗ ರಸ್ತೆ ಹಾಗೂ ಪಿಕಳೆ ರಸ್ತೆಯ ಮಾರ್ಗವಾಗಿ ಮೆರವಣಿಗೆಯನ್ನು ನಡೆಸಿ ಜಾಗೃತಿ ಮೂಡಿಸಲಾಯಿತು ಎನ್ನಲಾಗಿದೆ.
ಇದೇ ಸಂದರ್ಭದಲ್ಲಿ ಶಾಲಾ ಮಕ್ಕಳು, ಪೌರಾಯುಕ್ತ ಆರ್.ಪಿ. ನಾಯ್ಕ, ಆರೋಗ್ಯ ನಿರೀಕ್ಷಕ ಯಾಕೂಬ್ ಶೇಖ್, ದೀಪಾ ಶೆಟ್ಟಿ
ಹಾಗೂ ಇನ್ನಿತರ ಸಿಬ್ಬಂದಿಗಳು ಇದ್ದರು ಎಂದು ವರದಿಯಾಗಿದೆ.