ಕುಮಟಾ : ಮಳೆ ಪ್ರಾರಂಭವಾಗುತ್ತಿದ್ದಂತೆ ಮಳೆ ಅವಾಂತರಗಳು ಹೆಚ್ಚುತ್ತಿದ್ದು, ನದಿಗಳಲ್ಲಿ ನೀರಿನ ಮಟ್ಟ ಒಂದೆಡೆ ಏರಿಕೆಯಾಗುತ್ತಿದ್ದರೆ, ಇನ್ನೊಂದೆಡೆ ರಸ್ತೆ ಸಂಚಾರ ಅಸ್ತವ್ಯಸ್ತವಾಗುತ್ತಿದೆ. ಮಳೆಯ ಅಬ್ಬರಕ್ಕೆ ಶಿರಸಿ ಕುಮಟಾ ರಸ್ತೆ ಹೀಪನಳ್ಳಿ ಕತ್ರಿ ಹತ್ರ ಮರ ಬಿದ್ದ ಕಾರಣ ಸಂಚಾರಕ್ಕೆ ತೊಂದರೆಯಾಗಿದೆ ಎಂದು ವರದಿಯಾಗಿದೆ.
ರಾಷ್ಟ್ರೀಯ ಹೆದ್ದಾರಿಯಾಗಿ ಮೇಲ್ದರ್ಜೆಗೆ ಏರುತ್ತಿರುವ ಶಿರಸಿ ಕುಮಟಾ ರಸ್ತೆಯಲ್ಲಿ ಮರ ಬಿದ್ದ ಕಾರಣ ಸಂಚಾರ ಸ್ಥಗಿತಗೊಂಡಿದೆ. ತಕ್ಷಣ ತಾಲೂಕಾ ಆಡಳಿತದಿಂದ ತೆರವು ಕಾರ್ಯ ಆರಂಭಿಸಲಾಗಿದೆ ಎಂದು ಮಾಹಿತಿ ಲಭ್ಯವಾಗಿದೆ.