ಹುಬ್ಬಳ್ಳಿ : ಸರಳ ವಾಸ್ತು ಖ್ಯಾತಿಯ, ಖ್ಯಾತ ಜ್ಯೋತಿಷಿ ಚಂದ್ರಶೇಖರ್‌ ಗುರೂಜಿ ಅವರನ್ನು ಚಾಕು ಇರಿದು ಬರ್ಬರವಾಗಿ ಹತ್ಯೆ ಮಾಡಲಾಗಿದೆ ಎಂದು ತಿಳಿದುಬಂದಿದೆ.‌ ಹುಬ್ಬಳ್ಳಿ ನಗರದ ಉಣಕಲ್ ಕ್ರಾಸ್ ಬಳಿ ಇರುವ ಖಾಸಗಿ ಹೊಟೆಲ್‌ನಲ್ಲಿ ದುಷ್ಕರ್ಮಿಗಳ ತಂಡ ಚಾಕುವಿನಿಂದ ಇರಿದು ಹತ್ಯೆ ಮಾಡಿದೆ ಎನ್ನಲಾಗಿದ್ದು, ಇಬ್ಬರು ದುಷ್ಕರ್ಮಿಗಳು ಕೃತ್ಯ
ನಡೆಸಿ ಪರಾರಿಯಾಗುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ ಎನ್ನಲಾಗಿದೆ.

RELATED ARTICLES  ತೇರದಾಳ ಕ್ಷೇತ್ರದಿಂದ ಸ್ಪರ್ಧಿಸುತ್ತೇನೆ ಎಂಬ ವರದಿಯಲ್ಲಿ ಯಾವುದೇ ಸತ್ಯಾಂಶವಿಲ್ಲ : ಬಿಎಸ್ ಯಡಿಯೂರಪ್ಪ

ಚಂದ್ರಶೇಖರ ಗೂರೂಜಿಯವರು ಸರಳವಾಸ್ತು ಕಾರ್ಯಕ್ರಮದಿಂದ ಪ್ರಸಿದ್ದಿ ಪಡೆದಿದ್ದರು. ಗ್ರಾಹಕರ ಸೋಗಿನಲ್ಲಿ ಬಂದು ಹತ್ಯೆ ಮಾಡಲಾಗಿದೆ ಎನ್ನಲಾಗತಿದೆ.

‌ಸದ್ಯಕ್ಕೆ ಅವರ ಮೃತ ದೇಹವನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದ್ದು,ಸ್ಥಳಕ್ಕೆ ಹುಬ್ಬಳ್ಳಿ ಪೊಲೀಸ್ ಆಯುಕ್ತ ಲಾಬೂರಾಮ್ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಎಂದು ವರದಿಯಾಗಿದೆ.

RELATED ARTICLES  ರಾಮಚಂದ್ರಾಪುರ ಮಠದಲ್ಲಿ ತ್ಯಾಗ ಪರ್ವ: ಸಾವಿರ ಭಕ್ತರಿಂದ ಸರಳ ಜೀವನ ಪ್ರತಿಜ್ಞೆ