ಕಾರವಾರ : ಉತ್ತರ ಕನ್ನಡ ಜಿಲ್ಲೆಯಲ್ಲಿ ಸತತ ಮೂರನೇ ದಿನವು ರಜೆ ಘೋಷಿಸಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ. ಎಡಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಮಂಗಳವಾರದಿಂದ ರಜೆ ಘೋಷಣೆ ಮಾಡಲಾಗಿದ್ದು ಇಂದು ಬುಧವಾರ ಸಹ ರಜೆಯನ್ನು ಮುಂದುವರಿಸಲಾಗಿತ್ತು. ಎಂದು ವರುಣಾ ಪಂಚಮಟಿಗೆ ಬಿಡುವು ನೀಡಿದ್ದನಾದರೂ ಮಳೆಯ ಪ್ರಮಾಣ ಏರಿಕೆಯಾಗುವ ಮುನ್ಸೂಚನೆ ನೀಡಲಾಗಿದೆ.
ನಾಳೆ ಗುರುವಾರವೂ (ದಿನಾಂಕ 07/07/2022) ಉತ್ತರಕನ್ನಡ ಜಿಲ್ಲೆಯಲ್ಲಿ ಅಂಗನವಾಡಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿ, ಜಿಲ್ಲಾಡಳಿತ ಆದೇಶ ಹೊರಡಿಸಿದೆ. ಈ ರಜೆಗಳನ್ನು ಮುಂದಿನ ದಿನಗಳಲ್ಲಿ ಸರಿದೂಗಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ. ಹವಾಮಾನ ಇಲಾಖೆಯ ಮುನ್ಸೂಚನೆಯನ್ನು ಗಮನಿಸಿ ಮಳೆ ಪ್ರಮಾಣದಲ್ಲಿ ಏರಿಕೆಯಾಗಬಹುದು ಹಾಗೂ ಅನಾಹುತಗಳನ್ನು ತಡೆಯುವ ನಿಟ್ಟಿನಲ್ಲಿ ಜಿಲ್ಲಾಡಳಿತ ಈ ಕ್ರಮಕ್ಕೆ ಮುಂದಾಗಿದೆ ಎಂದು ಹೇಳಲಾಗಿದೆ.