![](https://satwadhara.news/wp-content/uploads/2024/11/REXIN-GIF.gif)
ಕಾರವಾರ : ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆಯ ಪ್ರಮಾಣವು ಗಣನೀಯವಾಗಿ ಕಡಿಮೆಯಾಗಿರುವುದರಿಂದ ದಿನಾಂಕ: 11-07-2022 ರಂದು ಜಿಲ್ಲೆಯಾದ್ಯಂತ ಶೈಕ್ಷಣಿಕ ಸಂಸ್ಥೆಗಳಿಗೆ ರಜೆಯನ್ನು ಘೋಷಿಸಿರುವುದಿಲ್ಲ. ತೀರಾ ಅಗತ್ಯವೆಂದು ಕಂಡುಬಂದ ಶಾಲೆಗಳಿಗೆ ಮಾತ್ರ ರಜೆಯನ್ನು ನೀಡಲು ಸಂಬಂಧಪಟ್ಟ ತಾಲೂಕಿನ ತಹಶೀಲ್ದಾರ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ನಿರ್ದೇಶನ ನೀಡಲಾಗಿರುತ್ತದೆ ಎಂದು ಜಿಲ್ಲಾಧಿಕಾರಿಗಳು ಸ್ಪಷ್ಟವಾಗಿ ತಿಳಿಸಿದ್ದಾರೆ.
ಅದಾಗೀಯೂ ಜಿಲ್ಲಾಧಿಕಾರಿಗಳು ಉತ್ತರ ಕನ್ನಡ ರವರು ದಿನಾಂಕ: 11-07-2022 ರಂದು ರಜೆ ಘೋಷಿಸಿ ಆದೇಶಿಸಿದ್ದಾರೆ ಎನ್ನಲಾದ ನಕಲಿ ರಜೆ ಘೋಷಣಾ ಆದೇಶವು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿರುವುದನ್ನು ಗಮನಿಸಲಾಗಿದೆ. ಸದ್ರಿ ಆದೇಶವನ್ನು ಉತ್ತರ ಕನ್ನಡ ಜಿಲ್ಲಾಧಿಕಾರಿಗಳು ಹೊರಡಿಸಿರುವುದಿಲ್ಲ ನಕಲಿ ಆದೇಶವನ್ನು ಹೊರಡಿಸಿದ ವ್ಯಕ್ತಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು. ದಿನಾಂಕ: 11-07-2022 ರಂದು ಶೈಕ್ಷಣಿಕ ಸಂಸ್ಥೆಗಳು ಎಂದಿನಂತೆ ಕಾರ್ಯನಿರ್ವಹಿಸುತ್ತವೆ ಎಂದು ಧೃಡೀಕರಿಸಲಾಗಿದೆ.