ಕಾರವಾರ: ಆಧಾರ್ ನೋಂದಣಿ ಅದಾಲತ್ ಕಾರವಾರ ನಗರಸಭೆಯ ಸಭಾಂಗಣದಲ್ಲಿ ಇಂದಿನಿಂದ ಅಕ್ಟೋಬರ್ 1ರವರೆಗೆ ನಡೆಯಲಿದೆ ಎಂದು ಉತ್ತರಕನ್ನಡ ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ತಿಳಿಸಿದ್ದಾರೆ.

ಇ-ಆಡಳಿತ ಬೆಂಗಳೂರು ಹಾಗೂ ಜಿಲ್ಲಾಡಳಿತ ಕಾರವಾರ ಸಹಯೋಗದೊಂದಿಗೆ ಆಧಾರ್ ನೋಂದಣಿ ಅದಾಲತ್ ನಡೆಯುತ್ತಿದ್ದು, ಈ ಹಿಂದೆ ಆಧಾರ್‌ನಲ್ಲಿ ಆಗಿರುವ ದೋಷಗಳನ್ನು ಸರಿಪಡಿಸುವುದು ಹಾಗೂ ವಿವಿಧ ಕಾರಣಗಳಿಂದ ಈವರೆಗೆ ಆಧಾರ್ ನೋಂದಣಿ ಮಾಡಿಸದಿದ್ದವರು ಈ ಆದಾಲತ್ ನಲ್ಲಿ ನೋಂದಣಿ ಮಾಡಿಸಲು ಸುವರ್ಣಾವಕಾಶ ಎಂದರು.

RELATED ARTICLES  ನಾವು ಧರ್ಮವನ್ನು ರಕ್ಷಿಸಿದರೆ ಧರ್ಮ ನಮ್ಮನ್ನು ರಕ್ಷಿಸುತ್ತದೆ : ನಾಗರಾಜ ನಾಯಕ

ಈ ಹಿಂದೆ ಆಧಾರ್ ನೋಂದಣಿ ಮಾಡಿಸಿ, ತಾಂತ್ರಿಕ ಕಾರಣಗಳಿಂದ ಆಧಾರ್ ಸಿಗದಿದ್ದವರೂ ಮತ್ತೊಮ್ಮೆ ಆಧಾರ್ ನೋಂದಣಿ ಮಾಡಿಸಬೇಕು. ಅಲ್ಲದೆ, ಮೊಬೈಲ್ ಲಿಂಕ್, ವಿಳಾಸ ಬದಲಾವಣೆ, ಹೆಸರಿನಲ್ಲಿನ ದೋಷಗಳ ತಿದ್ದುಪಡಿ, ವಯಸ್ಸು ಮತ್ತು ಹುಟ್ಟಿದ ದಿನಾಂಕದ ತಿದ್ದುಪಡಿಗಳ ಅವಶ್ಯವಿದ್ದಲ್ಲೂ ಅದಾಲತ್ ಕೇಂದ್ರದಲ್ಲಿ ನೋಂದಣಿ ಮಾಡಿಸಬೇಕಿದೆ ಎಂದರು. ಕಂಟ್ರೋಲ್ ರೂಂ ಸಹಾಯವಾಣಿ ಸಂಖ್ಯೆ 08382- 229857 ಹಾಗೂ 1077 ನಂಬರಿಗೆ ಕರೆ ಮಾಡಿ ಸೌಲಭ್ಯವನ್ನು ಪಡೆಯಬಹುದಾಗಿದೆ ಎಂದರು.