ಬೆಂಗಳೂರು: ಉತ್ತರ ಕನ್ನಡ ಜಿಲ್ಲೆಯಲ್ಲಿ ಒಂದು ಸುಸಜ್ಜಿತ ಆಸ್ಪತ್ರೆ ನಿರ್ಮಾಣ ಆಗಬೇಕು ಎಂದು ಒತ್ತಾಯಿಸಿ ಸರ್ಕಾರದ ಗಮನ ಸೆಳೆಯಲು ಬೆಂಗಳೂರಿನಲ್ಲಿ ವಾಸವಾಗಿರುವ ಉತ್ತರ ಕನ್ನಡ ಜಿಲ್ಲೆ ಜನರು ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ಇಂದು, ಶನಿವಾರ ಹಕ್ಕೊತ್ತಾಯದ ಮತಪ್ರದರ್ಶನ ನಡೆಸಿದರು. ಎಲ್ಲರೂ We Need SuperSpeciality Hospital In UttaraKannada ಎಂಬ ಘೋಷ ವಾಕ್ಯದೊಂದಿಗೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಒಂದು ಸುಸಜ್ಜಿತ ಆಸ್ಪತ್ರೆ ನಿರ್ಮಾಣ ಆಗಬೇಕು, ಉತ್ತರ ಕನ್ನಡ ಜಿಲ್ಲೆಗೆ ಸುಪರ್‌ ಸ್ಪೆಶಾಲಿಟಿ ಆಸ್ಪತ್ರೆ ಬೇಕೇಬೇಕು ಎಂದು ಫಲಕಗಳನ್ನು ಪ್ರದರ್ಶಿಸಿದರು.
ಉತ್ತರ ಕನ್ನಡ ಜಿಲ್ಲೆಯಲ್ಲಿ ಒಂದು ಸುಸಜ್ಜಿತ ಆಸ್ಪತ್ರೆ ನಿರ್ಮಾಣ ಆಗಲೇಬೇಕು, ಆರೋಗ್ಯ ಸಂಬಂಧಿ ಸಮಸ್ಯೆಗಳಿಗಾಗಿ ಬೇರೆ ಬೇರೆ ಜಿಲ್ಲೆಗಳಿಗೆ ಹೋಗುವಾಗ ಜನರು ದಾರಿ ಮಧ್ಯೆ ಸಾಯುವುದನ್ನು ತಪ್ಪಿಸಬೇಕು ಎಂದು ಅಲ್ಲಿನ ಜ್ವಲಂತ ಸಮಸ್ಯೆಯ ಬಗ್ಗೆ ಧ್ವನಿ ಎತ್ತುವ ಮೂಲಕ ಜಿಲ್ಲೆಯಲ್ಲಿ ಸುಸಜ್ಜಿತ ಆರೋಗ್ಯ ಸೌಲಭ್ಯ ಜನರಿಗೆ ಸಿಗಬೇಕು ಎಂದು ಬೆಂಗಳೂರಿನಲ್ಲಿ ನೆಲೆಸಿರುವ ಉತ್ತರ ಕನ್ನಡ ಮೂಲದ ಸುಮಾರು ಎರಡು ಸಾವಿರಕ್ಕೂ ಹೆಚ್ಚು ಜನರು ರಾಜ್ಯ ರಾಜಧಾನಿಯಲ್ಲಿ ಧ್ವನಿ ಎತ್ತಿದ್ದಾರೆ.

RELATED ARTICLES  ಲಿಂಗಾಯತ ಪ್ರತ್ಯೇಕ ಧರ್ಮಕ್ಕೆ ವಿರೋಧ ವ್ಯಕ್ತಪಡಿಸಿರುವ ಪೇಜಾವರ ಶ್ರೀಗಳು!

ಹಕ್ಕೊತ್ತಾಯದ ಅಭಿಯಾನದಲ್ಲಿ ಪಾಲ್ಗೊಂಡಿದ್ದ ಖ್ಯಾತ ಅಂಕಣಕಾರ ಹಾಗೂ ಯುವ ಬ್ರಿಗೇಡ್‌ನ ಚಕ್ರವರ್ತಿ ಸೂಲಿಬೆಲೆ, ಸಿನೆಮಾ ನಟ ಶಂಕರ ಭಟ್‌, ರಾಜೀವ ಗಾಂವಕರ ಮಾತನಾಡಿ, ಉತ್ತರ ಕನ್ನಡ ಜನ ಹಲವಾರು ರಾಜ್ಯ ಹಾಗೂ ರಾಷ್ಟ್ರಮಟ್ಟದ ಯೋಜನೆಗಳಿಗಾಗಿ ತ್ಯಾಗ ಮಾಡಿದ್ದಾರೆ. ಆದರೆ ಉತ್ತರ ಕನ್ನಡದವರಿಗೆ ಸರಿಯಾದ ಆರೋಗ್ಯ ಸೌಲಭ್ಯವಿಲ್ಲ. ಉತ್ಖೃಷ್ಠ ಹಾಗೂ ತುರ್ತು ಆರೋಗ್ಯ ಸೇವೆಗಳಿಗಾಗಿ ಜನರು ಬೇರೆ ಬೇರೆ ಜಿಲ್ಲೆಗಳಿಗೆ ಹೋಗಬೇಕಾಗಿದೆ. ಹೀಗಾಗಿ ರಾಜ್ಯ ಸರ್ಕಾರ ಉತ್ತರ ಕನ್ನಡಕ್ಕೆ ತಕ್ಷಣವೇ ಜನರ ಬಹುದಿನಗಳ ಬೇಡಿಕೆಯಾದ ಸುಪರ್‌ ಸ್ಪಶಾಲಿಟಿ ಆಸ್ಪತ್ರೆ ಮಂಜೂರಿ ಮಾಡಿ ತಕ್ಷಣವೇ ನಿರ್ಮಾಣಕ್ಕೆ ಮುಂದಾಗಬೇಕು ಎಂದು ಒತ್ತಾಯಿಸಿದರು.
ಈ ಹೋರಾಟವನ್ನು ಇಲ್ಲಿಗೆ ಬಿಡುವುದು ಬೇಡ. ಸರ್ಕಾರ ಸುಪರ್‌ ಸ್ಪಶಾಲಿಟಿ ಆಸ್ಪತ್ರೆ ಮಂಜೂರಿ ಮಾಡಿ ಅದಕ್ಕೆ ಚಾಲನೆ ನೀಡುವವರೆಗೂ ಹೋರಾಟ ವಿವಿಧ ಹಂತಗಳಲ್ಲಿ ಮುಂದುವರಿಯಬೇಕು. ಉತ್ತರ ಕನ್ನಡ ಜಿಲ್ಲೆಯ ಮೂದಲವರಾಗಿ ನಾನು ನಮ್ಮ ಉತ್ತರ ಕನ್ನಡ ಜಿಲ್ಲೆಯ ಜನರ ಧ್ವನಿಗೆ ನಾವು ಧ್ವನಿಯಾಗಬೇಕು ಎಂದು ಅಭಿಪ್ರಾಯಪಟ್ಟರು.

RELATED ARTICLES  ದಿನಾಂಕ 09/06/2019 ರ ರಾಶಿ ಭವಿಷ್ಯ ಇಲ್ಲಿದೆ

ಹೋರಾಟದಲ್ಲಿ ನಮಗೆ ಮುಖ್ಯವಾಗಿ ಬೇಕಾದದು ಒಗ್ಗಟ್ಟು. ಈ ನಿಟ್ಟಿನಲ್ಲಿ ಬೆಂಗಳೂರಿನಲ್ಲಿ ನೆಲೆಸಿರುವ ಉತ್ತರ ಕನ್ನಡದವರು ಒಗ್ಗಟ್ಟು ಪ್ರದರ್ಶನ ಮಾಡಬೇಕು ಹಾಗೂ ಸರ್ಕಾರದ ಮೇಲೆ ಒತ್ತಡ ಹೇರಬೇಕು ಎಂದು ಮಾತನಾಡಿದವರು ಅಭಿಪ್ರಾಯಪಟ್ಟರು.

ಸರ್ಕಾರ ಆರೋಗ್ಯ ಸೌಲಭ್ಯ ಸಂಬಂಧಿ ನಮ್ಮ ಬೇಡಿಕೆಗಳನ್ನು ಈಡೇರಿಸದಿದ್ದಲ್ಲಿ ಮುಂದೆ ಬೇರೆ ಬೇರೆ ರೀತಿಯಲ್ಲಿ ಹೋರಾಟ ನಡೆಸಬೇಕು. ಸಂದರ್ಭ ಬಂದರೆ ಚುನಾವಣಾ ಸಂದರ್ಭದಲ್ಲಿ ನಮಗೆ ಯಾರೂ ಬೇಡ ಎಂದು ನೋಟಾ ಚಲಾವಣೆಗೂ ಮುಂದಾಗಬೇಕು ಎಂಬ ಕೆಲವರು ಅಭಿಪ್ರಾಯ ವ್ಯಕ್ತಪಡಿಸಿದರು.

ಅಭಿಆಯನದಲ್ಲಿ ಎರಡು ಸಾವಿರಕ್ಕೂ ಹೆಚ್ಚು ಜನರು ಪಾಲ್ಗೊಂಡಿದ್ದರು. ನಂತರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಆರೋಗ್ಯ ಸಚಿವ ಡಾ.ಸುಧಾಕರ ಅವರಿಗೆ ಮನವಿ ಪತ್ರ ನೀಡಲು ನಿರ್ಧರಿಸಲಾಯಿತು. ಹೋರಾಟ ಇಲ್ಲಿಗೆ ನಿಲ್ಲಬಾರದು. ಉತ್ತರ ಕನ್ನಡ ಜಿಲ್ಲೆಯಲ್ಲಿ ಹೆಚ್ಚಿನ ತಾಲೂಕಿನವರಿಗೆ ಅನುಕೂಲವಾಗುವ ಸ್ಥಳದಲ್ಲಿ ಆಸ್ಪತ್ರೆ ನಿರ್ಮಾಣ ಆಗುವ ವರೆಗೂ ಸುಸಜ್ಜಿತ ಆಸ್ಪತ್ರೆ ವಿಷಯದಲ್ಲಿ ತಾರ್ಕಿಕ ಅಂತ್ಯ ಸಿಗುವ ವರೆಗೂ ವಿವಿಧ ಹಂತಗಳಲ್ಲಿ ಈ ಅಭಿಯಾನ ನಡೆಸಬೇಕು ಎಂದು ಅಭಿಪ್ರಾಯಗಳು ವ್ಯಕ್ತವಾದವು.