ಸಿದ್ದಾಪುರ: ಸರಕಾರಿ ಪದವಿಪೂರ್ವ ಕಾಲೇಜಿನ ಪ್ರಥಮ ಪಿ ಯು ವಿದ್ಯಾರ್ಥಿ ದೊಡ್ಮನೆಯ ಭರತ್ ರಾಮನಾಥ ಹೆಗಡೆ ಪೋಲಂಡ್‌ನಲ್ಲಿ ನಡೆಯುವ ಅಂತರಾಷ್ಟ್ರೀಯ ಚೆಸ್ ಚಾಂಪಿಯನ್ ಶಿಪ್‌ಗೆ ಆಯ್ಕೆಯಾಗಿದ್ದಾನೆ ಎಂದು ತಿಳಿದುಬಂದಿದೆ.
ಗುಜರಾತಿನಲ್ಲಿ ನಡೆದ 23ನೇ ರಾಷ್ಟ್ರೀಯ ಚೆಸ್ ಚಾಂಪಿಯನ್ ಶಿಪ್ ನಲ್ಲಿ ಪ್ರಥಮ ಸ್ಥಾನ ಪಡೆದುಕೊಂಡಿದ್ದಾನೆ. ಪೋಲಂಡ್ ನಲ್ಲಿ ನಡೆಯುವ ಅಂತರಾಷ್ಟ್ರೀಯ ಚೆಸ್ ಚಾಂಪಿಯನ್‌ಶಿಪ್‌ಗೆ ಆಯ್ಕೆಯಾಗಿದ್ದಾನೆ ಎಂದು ವರದಿಯಾಗಿದೆ.
ಇತನು ಲತಾ ಹೆಗಡೆ ಮತ್ತು ರಾಮನಾಥ ಹೆಗಡೆಯವರ ಪುತ್ರ. ಇತನ ಸಾಧನೆಗೆ ತಂದೆ ತಾಯಿ, ಶಿಕ್ಷರು, ತಾಲೂಕಿನ ಜನತೆ ಹರ್ಷ ವ್ಯಕ್ತಪಡಿಸಿ, ಶುಭ ಹಾರೈಸಿದ್ದಾರೆ ಎನ್ನಲಾಗಿದೆ.