ಶಿರಸಿ : ಅನೇಕರಿಗೆ ಹಾವಿನ ಬಗ್ಗೆ ಅತಿಯಾದ ಭಯವಿದೆ. ಹಾವಿನ ಕುರಿತು ಅದರ ವೈಶಿಷ್ಟ್ಯ ಹಾಗೂ ಪ್ರಾಮುಖ್ಯತೆಯ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಉದ್ದೇಶ ಪ್ರಶಾಂತ ಹುಲೇಕಲ್ ಅವರದ್ದು. ಉತ್ತರ ಕನ್ನಡ ಜಿಲ್ಲೆ ಶಿರಸಿಯ ಪ್ರಶಾಂತ್ ಹುಲೇಕಲ್ ಕುಟುಂಬದ ಸದಸ್ಯರು ಪ್ರತೀ ವರ್ಷದಂತೆ ಈ ಬಾರಿ ಕೂಡ ನಿಜ ನಾಗರಕ್ಕೆ ಹಾಲೆರೆದು ಪಂಚಮಿ ಪೂಜೆ ಆಚರಿಸಿದರು. ಪ್ರತಿ ವರ್ಷ ಒಂದು ನಾಗರಹಾವನ್ನ ಪೂಜೆ ಮಾಡುತ್ತಿದ್ದ ಪ್ರಶಾಂತ್ ಕುಟುಂಬ ಈ ಭಾರಿ ಮೂರು ನಾಗರಹಾವುಗಳನ್ನ ತಂದು ಪೂಜೆ ಸಲ್ಲಿಸಿರೋದು ವಿಶೇಷ. ಕಳೆದ ಮೂವತ್ತೇಳು ವರ್ಷಗಳಿಂದ ನಿರಂತರವಾಗಿ ಉರಗ ಸಂತತಿಯ ಸಂರಕ್ಷಣೆಯ ಬಗ್ಗೆ ವಿಶೇಷ ಕಾಳಜಿಯನ್ನು ತೋರುತ್ತ ಬಂದಿರುವುದು ಪ್ರಶಾಂತ್ ಹುಲೇಕಲ್ ಕುಟುಂಬ ಪ್ರತಿ ನಾಗರ ಪಂಚಮಿ ಹಬ್ಬವನ್ನು ನಾಗ ಸಂತತಿಯ ಬಗ್ಗೆ ಸಂದೇಶ ಸಾರುವ ಸಂದರ್ಭವನ್ನಾಗಿ ಬಳಸಿ ಕೊಳ್ಳುತ್ತಿದೆ.

RELATED ARTICLES  ಮುಳ್ಳುಹಂದಿ ಭೇಟೆಯಾಡಿ ಸಾಗಿಸುವಾಗ ದಾಳಿ : ಆರೋಪಿಗಳು ವಶಕ್ಕೆ.

ಕುಟುಂಬದ ಹಿರಿಯ ಸುರೇಶಣ್ಣ ಮರಣದ ಬಳಿಕ ಅವರ ಮಕ್ಕಳಾದ ಪ್ರಶಾಂತ, ಪ್ರಕಾಶ ಹಾಗೂ ಪ್ರಣವ ನಿಜವಾದ ಹಾವಿಗೆ ಪೂಜೆ ಸಲ್ಲಿಸಿ ನಾಗಪಂಚಮಿ ಆಚರಣೆ ಮಾಡುತ್ತಿದ್ದಾರೆ. ವಿಷದ ಹಲ್ಲುಗಳಿರುವ ಸರ್ಪಗಳನ್ನು ಮನೆಯೊಳಗೆ ಪ್ರತಿಷ್ಠಾಪಿಸಿ ಇತರರು ಕಲ್ಲು ನಾಗರಗಳಿಗೆ ಹಾಲೆರೆದಂತೆ ಹಾಲೆರೆದು ಪೂಜೆ ಮಾಡುವ ಪದ್ದತಿ ಅನುಸರಿಸುತ್ತಿದ್ದಾರೆ. ಇನ್ನು ಪ್ರಶಾಂತ್ ಪತ್ನಿ, ಮಗಳು ಹಾಗೂ ಮಗ ಕೂಡ ನಿಜ ಹಾವನ್ನ ಕಂಡು ಭಯ ಪಡದೆ ಪೂಜೆ ಸಲ್ಲಿಸೋದು ನಿಜಕ್ಕೂ ಆಶ್ಚರ್ಯ ಪಡುವಂತದ್ದು. ಮನೆಯ ಸದಸ್ಯರೆಲ್ಲ ಸೇರಿ ಹೂವು, ಅಕ್ಷತೆ ಹಾಕಿ ಆರತಿ ಬೆಳಗಿ ನಾಗಪಂಚಮಿ ಆಚರಿಸುತ್ತಾರೆ.

ಹುಲೇಕಲ್ ಕುಟುಂಬದ ಪ್ರಶಾಂತ ಅವರು ಸಾರ್ವಜನಿಕವಾಗಿ ಕಾಣಿಸಿಕೊಳ್ಳುವ ಹಾವುಗಳನ್ನು ಹಾಗೂ ಅಪಾಯದಲ್ಲಿರುವ ಹಾವನ್ನು ರಕ್ಷಿಸಿ ಕಾಡಿಗೆ ಬಿಟ್ಟು ಬರುವ ಕಾಯಕ ನಿರಂತರವಾಗಿ ಮಾಡುತ್ತಿದ್ದಾರೆ. ಎಲ್ಲಿ, ಯಾವುದೇ ಸಂದರ್ಭದಲ್ಲಿ ದೂರವಾಣಿ ಕರೆ ಬಂದರೂ ತಕ್ಷಣ ದೌಡಾಯಿಸಿ ಎಂತಹ ಘಟಸರ್ಪ ವನ್ನಾದರೂ ಸರಾಗವಾಗಿ ಚೀಲದಲ್ಲಿ ತುಂಬಿ ಕಾಡಿಗೆ ಮರಳಿಸುತ್ತಾರೆ. ಅರಣ್ಯ ಇಲಾಖೆಯವರೂ ಹೆಚ್ಚಾಗಿ ಹಾವಿನ ರಕ್ಷಣೆ ಸನ್ನಿವೇಶ ಎದುರಾದರೆ ನೆನಪಿಸಿ ಕೊಳ್ಳುವುದು ಪ್ರಶಾಂತ ಅವರನ್ನೇ.

RELATED ARTICLES  ಪೊಲೀಸರ ಚುರುಕಿನ ಕಾರ್ಯಾಚರಣೆ : ಆರೋಪಿಗಳು ಅರೆಸ್ಟ್

ಕೆಲವು ವರ್ಷದಿಂದಲೂ ಕಾಡಿಗೆ ಹೋಗಿ ಹಾವು ಹಿಡಿದು ಪೂಜೆ ಸಲ್ಲಿಸುತ್ತಿದ್ದ ಬರುತ್ತಿದ್ದ ಪ್ರಶಾಂತ್ ಕುಟುಂಬ ಇದೀಗ ಮನೆಯಲ್ಲೆ ಹಾವು ತಂದು ಪೂಜೆ ಮಾಡಿ ದ್ದಾರೆ. ಅಲ್ಲದೆ ನಿಜ ನಾಗನಿಗೆ ಪೂಜೆ ಮಾಡೋದನ್ನ ಕಂಡು ಸ್ಥಳೀಕರು ಕೂಡ ಸಂತೋಷ ಪಟ್ಟಿದ್ದಾರೆ.