ಕಾರವಾರ : ಜಿಲ್ಲೆಯಲ್ಲಿ ದಿನಾಂಕ 03-08-2022 ರಿಂದ 06-08-2022 ರ ಬೆಳಿಗ್ಗೆ 8-30 ರವರೆಗೆ ಜಿಲ್ಲೆಯಲ್ಲಿ ಭಾರೀ ಮಳೆ ಬೀಳುವ ಸೂಚನೆಯನ್ನು (RED Alert) ನ್ನು ಭಾರತೀಯ ಹವಾಮಾನ ಇಲಾಖೆರವರು ನೀಡಿರುತ್ತದೆ. ಈ ಸಮಯದಲ್ಲಿ ಅಪಾಯಕಾರಿ ಸ್ಥಳಗಳಲ್ಲಿರುವಂತಹ ಜನರಿಗೆ ಸೂಕ್ತ ತಿಳುವಳಿಕೆ ನೀಡಿ, ಅಲ್ಲಿನ ಜನ ಹಾಗೂ
ಜಾನುವಾರುಗಳನ್ನು ಮುಂಚಿತವಾಗಿ ಸುರಕ್ಷಿತ ಸ್ಥಳಕ್ಕೆ ಸಾಗಿಸುವ ಬಗ್ಗೆ ತಾಲೂಕಾಡಳಿತವು ಅಗತ್ಯ ಕ್ರಮ ಕೈಗೊಳ್ಳತಕ್ಕದ್ದು ಎಂದು ಜಿಲ್ಲಾಧಿಕಾರಿಗಳು ಸೂಚನೆ ನೀಡಿದ್ದಾರೆ.
ಈ ಸಮಯದಲ್ಲಿ ಜಿಲ್ಲೆಯ ಎಲ್ಲಾ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಎಲ್ಲಾ ತಾಲೂಕಿನ ನೋಡಲ್ ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿದ್ದು ಕರ್ತವ್ಯ ನಿರ್ವಹಿಸುವುದು. ಕಾರಣ ಸಾರ್ವಜನಿಕರು, ಮೀನುಗಾರರು ಹಾಗೂ ಪ್ರವಾಸಿಗರು ಅಗತ್ಯ ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳಲು ಕೋರಿದ್ದಾರೆ.
ಮೀನುಗಾರರು ಈ ಸಂದರ್ಭದಲ್ಲಿ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ವಹಿಸಲು ಮೀನುಗಾರಿಕೆ ಇಲಾಖೆಗೆ ತಿಳಿಸಿದ್ದಾರೆ.
ವಿಶೇಷ ಸೂಚನೆ: ಮಳೆ-ಗಾಳಿ ಬೀಸುವ ಸಂದರ್ಭದಲ್ಲಿ ಮಕ್ಕಳು/ಸಾರ್ವಜನಿಕರು ಅಪಾಯಕಾರಿ ವಿದ್ಯುತ್ ಕಂಬ, ಕಟ್ಟಡ, ಮರಗಳ ಹತ್ತಿರ ಹಾಗೂ ಕೆಳಗೆ ನಿಲ್ಲದೇ, ಸುರಕ್ಷಿತ ಸ್ಥಳಗಳಲ್ಲಿ ಆಶ್ರಯ ಪಡೆಯುವುದು. ಪ್ರಕೃತಿ ವಿಕೋಪ ಸಂಬಂಧಿತ ಯಾವುದೇ ಸಮಸ್ಯೆಗಳಿಗೆ ಈ ಕೆಳಕಂಡ ವಾಣಿ ಸಂಖ್ಯೆಗಳನ್ನು ಸಂಪರ್ಕಿಸಬಹುದಾಗಿದೆ.
ತುರ್ತು ಸೇವೆಗೆ ಟೋಲ್ ಫ್ರೀ ಸಂಖ್ಯೆ 24 *7 ಕಂಟ್ರೋಲ್ ರೂಮ್ -1077 ಲ್ಯಾಂಡ್ ಲೈನ್ ನಂ. 08382 – 229857 ವಾಟ್ಸಪ್ ನಂ: 9483511015