ಬೆಂಗಳೂರು: ಉತ್ತರಕನ್ನಡದ ವ್ಯಕ್ತಿಯೋರ್ವರಿಗೆ ಮಂಕಿ ಫಾಕ್ಸ್ ಪ್ರಕರಣದ ವರದಿಗಾಗಿ ಕಾಯಲಾಗುತ್ತಿದ್ದು, ಜನತೆಯ ಕಣ್ಣು ಅತ್ತಲೇ ನೆಟ್ಟಿದೆ. ರಾಜ್ಯದ ಮೂವರು ವ್ಯಕ್ತಿಗಳ ಪೈಕಿ ಇಬ್ಬರು ವ್ಯಕ್ತಿಗಳ ಪರೀಕ್ಷಾ ವರದಿ ನೆಗೆಟಿವ್ ಇದೆ. ಬೆಲ್ಲಿಯಂನಿಂದ ಪ್ರಯಾಣ ಮಾಡಿದ್ದ ಉತ್ತರ ಕನ್ನಡ ಜಿಲ್ಲೆಯ ವ್ಯಕ್ತಿಯ ಪರೀಕ್ಷಾ ವರದಿ ಇನ್ನೂ ಬರಬೇಕಿದೆ ಎಂದು ಮುಖ್ಯಮಂತ್ರಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಬೆಲ್ಲಿಯಂನಿಂದ ಆಗಮಿಸಿದ ಉತ್ತರಕನ್ನಡದ ವ್ಯಕ್ತಿಯ ರಕ್ತದ ಮಾದರಿಯನ್ನು ಪುಣೆಯಲ್ಲಿರುವ ರಾಷ್ಟ್ರೀಯ ವೈರಾಣು ಸಂಸ್ಥೆಗೆ ಕಳುಹಿಸಲಾಗಿದ್ದು ಫಲಿತಾಂಶಕ್ಕಾಗಿ ಕಾಯಲಾಗುತ್ತಿದೆ. ಅವರು ಮುಖ್ಯಮಂತ್ರಿಗಳು ಮಂಕಿಪಾಕ್ಸ್ ಕುರಿತಂತೆ ಗೃಹ ಕಚೇರಿ ಕೃಷ್ಣಾದಲ್ಲಿ ಸಭೆ ನಡೆಸಿ ಮಾತನಾಡಿ ರಾಜ್ಯದಲ್ಲಿ ಮಂಕಿಪಾಕ್ಸ್ ಹರಡದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ವಹಿಸಬೇಕೆಂದು ಸೂಚಿಸಿದರು.
ಮುಖ್ಯಮಂತ್ರಿಗಳು ದೇಶದಲ್ಲಿ ಆರು ಮಂಕಿಪಾಕ್ಸ್ ಪಕರಣಗಳು ದಾಖಲಾಗಿದೆ. ಅಧಿಕಾರಿಗಳಿಗೆ ಈಗಾಗಲೇ ಸೂಚನೆ ನೀಡಿದ್ದೇವೆ, ವಿಮಾನನಿಲ್ದಾಣಗಳಲ್ಲಿ ಸೋಂಕಿತರ ಪರೀಕ್ಷೆಗೆ ಸೂಕ್ತ ಕ್ರಮ ವಹಿಸಬೇಕು. ಕೇಂದ್ರ ಸರ್ಕಾರ ಬಿಡುಗಡೆ ಮಾಡಿರುವ ಮಾರ್ಗಸೂಚಿಯಂತೆ ಸೋಂಕು
ದೃಢಪಟ್ಟ ವ್ಯಕ್ತಿಗಳನ್ನು 21 ದಿನಗಳ ಕ್ವಾರಂಟೈನ್ ಮಾಡುವುದು ಸೇರಿದಂತೆ ಅಗತ್ಯ ಕ್ರಮ ಕೈಗೊಳ್ಳಲು ಸೂಚಿಸಿದ್ದಾರೆ.