ಹೊನ್ನಾವರ : ಕಳೆದ ಎರಡು ಮೂರು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತವಾಗುತ್ತಿದೆ. ಸತತವಾಗಿ ಬೀಳುತ್ತಿರುವ ಮಳೆಯಿಂದಾಗಿ ಲಿಂಗನಮಕ್ಕಿ ಜಲಾಶಯಕ್ಕೆ ಭಾರಿ ಪ್ರಮಾಣದಲ್ಲಿ ಒಳಹರಿವು ಹೆಚ್ಚುತ್ತಿದ್ದು ಲಿಂಗನಮಕ್ಕಿ ಜಲಾಶಯದ ನೀರಿನ ಮಟ್ಟವು ದಿನದಿನೇ ಏರುತ್ತಿರುತ್ತದೆ. ಜಲಾಶಯದ ಗರಿಷ್ಠ ಮಟ್ಟವು 1819.00 ಅಡಿಗಳಾಗಿದ್ದು ಮಳೆ ಇಂದಿನ ಬೆಳಗ್ಗೆ 8.00 ಘಂಟೆಗೆ ಜಲಾಶಯದ ನೀರಿನ ಮಟ್ಟ 1801.35 ಅಡಿಗಳಾಗಿರುತ್ತದೆ.

RELATED ARTICLES  ಮುಂದಿನ ನಾಲ್ಕೈದು ದಿನಗಳ ಕಾಲ ರಾಜ್ಯದ 17 ಜಿಲ್ಲೆಗಳಲ್ಲಿ ಭಾರೀ ಮಳೆ

ಇಂದು ಸುಮಾರು 30,000 ಕ್ಯೂಸೆಕ್ ಗಳಿಗಿಂತಲೂ ಹೆಚ್ಚಿನ ಪ್ರಮಾಣದ ನೀರು ಹರಿದು ಬರುತ್ತಿದ್ದು ಇದೇ ರೀತಿಯಲ್ಲಿ ಜಲಾಶಯಕ್ಕೆ ಬರುವ ನೀರಿನ ಹರಿವು ಮುಂದುವರೆದ ಪಕ್ಷದಲ್ಲಿ ಜಲಾಶಯವು ಶೀಘ್ರದಲ್ಲಿ ಗರಿಷ್ಠ ಮಟ್ಟವನ್ನು ತಲುಪುವ ಸಾಧ್ಯತೆ ಇದೆ.

ಆದ್ದರಿಂದ, ಅಣೆಕಟ್ಟೆಯ ಸುರಕ್ಷತಾ ದೃಷ್ಠಿಯಿಂದ ಹೆಚ್ಚುವರಿ ನೀರನ್ನು ಜಲಾಶಯದಿಂದ ಯಾವುದೇ ಸಮಯದಲ್ಲಿ ಹೊರಬಿಡಲಾಗುವುದು ಎಂದು ಮೊದಲ ಮುನ್ನೆಚ್ಚರಿಕೆಯ ಪತ್ರ ಹೊರಡಿಸಿಲಾಗಿದ್ದು, ಜನತೆಗೆ ಸೂಕ್ತ ಎಚ್ಚರಿಕೆಯನ್ನು ನೀಡಲಾಗಿದೆ. ಅಣೆಕಟ್ಟೆಯ ಕೆಳದಂಡೆಯಲ್ಲಿ ಹಾಗೂ ನದಿಯ ಪಾತ್ರದುದ್ದಕ್ಕೂ ವಾಸಿಸುತ್ತಿರುವ ಸಾರ್ವಜನಿಕರು ತಮ್ಮ ಜನ, ಜಾನುವಾರು ವಗೈರೆಗಳೊಂದಿಗೆ ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರಿಸಿಕೊಳ್ಳಬೇಕೆಂದು ಸೂಚಿಸಲಾಗಿದೆ.

RELATED ARTICLES  ಹೊನ್ನಾವರದಲ್ಲಿ ನಾಳೆಯೂ ರಜೆ ಮುಂದುವರಿಕೆ.

ಲಿಂಗನಮಕ್ಕಿ ಜಲಾಶಯದಿಂದ ನೀರು ಬಿಟ್ಟರೆ, ಆ ನೀರು ಗೇರುಸೋಪ್ಪಾ ಜಲಾಶಯಕ್ಕೆ ಹರಿದು ಬರುತ್ತದೆ. ಲಿಂಗನಮಕ್ಕಿ ಜಲಾಶದಿಂದ ಹರಿಬಿಟ್ಟ ಅಷ್ಟೆ ಪ್ರಮಾಣದ ನೀರನ್ನು ಗೇರುಸೋಪ್ಪಾ ಜಲಾಶಯದ ಹಿತ ದೃಷ್ಟಿಯಿಂದ ಹೊರಬಿಡಲಾಗುವುದು ಎಂದು ತಿಳಿಸಿದ್ದಾರೆ.