ಕುಮಟಾ : ತಾಲೂಕಿನ ಪ್ರತಿಷ್ಠಿತ ಕೊಂಕಣ ಎಜ್ಯುಕೇಷನ್ ಟ್ರಸ್ಟಿನಲ್ಲಿ ವಿಧಾತ್ರಿ ಅಕಾಡೆಮಿಯ ಸಹಯೋಗದಲ್ಲಿ ನಡೆಯುತ್ತಿರುವ ಬಿ.ಕೆ ಭಂಡಾರಕರ್ಸ್ ಸರಸ್ವತಿ ಪದವಿಪೂರ್ವ ಕಾಲೇಜಿನ ವಿಜ್ಞಾನ ವಿಭಾಗದಲ್ಲಿ ಸಾಧನೆಮಾಡಿದ ವಿದ್ಯಾರ್ಥಿಗಳಿಗೆ “ವಿಧಾತ್ರಿ ಅವಾರ್ಡ” ಕಾರ್ಯಕ್ರಮ ಇತ್ತೀಚೆಗೆ ಸಂಸ್ಥೆಯ ಸಭಾಭವನದಲ್ಲಿ ನಡೆಯಿತು.
ಮಂಗಳೂರು ಮಾದರಿಯ ಶಿಕ್ಷಣವನ್ನು ಕುಮಟಾದಲ್ಲಿ ನೀಡುತ್ತಿರುವ ಏಕೈಕ ಸಂಸ್ಥೆಯಾಗಿರುವ ವಿಧಾತ್ರಿ ಅಕಾಡೆಮಿಯ ಸಯೋಗದಲ್ಲಿ ನಡೆಯುತ್ತಿರುವ ಕೊಂಕಣ ಎಜುಕೇಶನ್ ಟ್ರಸ್ಟ್ ನ ಪಿ ಯು ಕಾಲೇಜ್ ಈ ವರ್ಷ ಉತ್ತರ ಕನ್ನಡದಲ್ಲಿ ೧೦೦% ದಾಖಲಿಸಿರುವ ಏಕೈಕ ಸಂಸ್ಥೆಯಾಗಿದ್ದು, ಸಾಧಕ ವಿದ್ಯಾರ್ಥಿಗಳನ್ನು ಸನ್ಮಾನಿಸುವ “ವಿಧಾತ್ರಿ ಅವಾರ್ಡ” ಕಾರ್ಯಕ್ರಮದಲ್ಲಿ ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಹಾಗೂ ಸಿ.ಇ.ಟಿ , ಜೆ.ಇ.ಇ ಪರೀಕ್ಷೆಯಲ್ಲಿ ಅಮೋಘ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಪುರಸ್ಕರಿಸಲಾಯಿತು.
ಅವಾರ್ಡ್ ವಿತರಿಸಿ ಮಾತನಾಡಿದ ವಿಧಾತ್ರಿ ಸಹ ಸಂಸ್ಥಾಪಕರಾದ ಗುರುರಾಜ ಶೆಟ್ಟಿಯವರು ವಿದ್ಯಾರ್ಥಿಗಳ ಸಾಧನೆಯನ್ನು ಮುಕ್ತಕಂಠದಿಂದ ಶ್ಲಾಘಿಸಿದರು. ಭವಿಷ್ಯದಲ್ಲಿ ಇನ್ನೂ ಉತ್ತಮ ಸಾಧನೆ ಗೈಯುವಂತೆ ಪ್ರೇರೇಪಿಸಿದ ಅವರು ವಿಧಾತ್ರಿ ಅಕಾಡೆಮಿಯು ಸಮರ್ಥ ಉಪನ್ಯಾಸಕ ವೃಂದದವರನ್ನು ಹೊಂದಿದೆ. ವಿದ್ಯಾರ್ಥಿಗಳು ಅವರ ಮಾರ್ಗದರ್ಶನದಂತೆ ಅಭ್ಯಾಸವನ್ನು ಮುಂದುವರೆಸಿದರೆ ಅಪೂರ್ವ ಯಶಸ್ಸು ಸಾಧಿವುದರಲ್ಲಿ ಯಾವುದೇ ಅನುಮಾನ ಇಲ್ಲ. ನಿಮ್ಮ ಉಪನ್ಯಾಸಕರ ಸಲಹೆಗಳನ್ನು ತಾವು ಚಾಚೂ ತಪ್ಪದೇ ಪಾಲಿಸಬೇಕು. ನಾವೂ ಕೂಡ ನಿಮ್ಮ ಆಶಯ ಈಡೇರಿಸುವ ನಿಟ್ಟಿನಲ್ಲಿ ಕಟಿಬದ್ದರಾಗಿದ್ದೇವೆ ಎಂಬ ಆಶ್ವಾಸನೆಯನ್ನು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಪ್ರಸಕ್ತ ವರ್ಷದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ನೀಡಿದರು.
ಈ ಸಂದರ್ಭದಲ್ಲಿ ಕಾಲೇಜಿ ಪ್ರಾಚಾರ್ಯ ಕಿರಣ ಭಟ್ ಉಪಪ್ರಾಚಾರ್ಯೆ ಸುಜಾತಾ ಹೆಗಡೆ ಉಪನ್ಯಾಸಕರು ಹಾಗೂ ಬೋಧಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.ಈ ವೇಳೆ ವಿಧಾತ್ರಿ ಅಕಾಡೆಮಿಯ ವಿದ್ಯಾರ್ಥಿಗಳು ಪ್ರಸ್ತುತ ಪ್ರಸ್ತತ ಪಡೆಸಿದ ವಿವಿಧ ಕಾರ್ಯಕ್ರಮವು ಎಲ್ಲರ ಗಮನ ಸೆಳೆಯಿತು.