ಕಾರವಾರ : ಉತ್ತರಕನ್ನಡ ಜಿಲ್ಲೆಯಲ್ಲಿ ದಿನಾಂಕ: 07-08-2022 ರಿಂದ 11-08-2022 ರ ಬೆಳಿಗ್ಗೆ 8-30 ರವರೆಗೆ ಜಿಲ್ಲೆಯಲ್ಲಿ ಭಾರೀ ಮಳೆ ಬೀಳುವ ಸೂಚನೆಯನ್ನು(Orange Aart) ನ್ನು ಕರ್ನಾಟಕ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಬೆಂಗಳೂರು ರವರು ನೀಡಿದ್ದಾರೆಂದು ಜಿಲ್ಲಾಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಈ ಸಮಯದಲ್ಲಿ ಅಪಾಯಕಾರಿ ಸ್ಥಳಗಳಲ್ಲಿರುವಂತಹ ಜನರಿಗೆ ಸೂಕ್ತ ತಿಳುವಳಿಕೆ ನೀಡಿ, ಅಲ್ಲಿನ ಜನ ಹಾಗೂ ಜಾನುವಾರುಗಳನ್ನು ಮುಂಚಿತವಾಗಿ ಸುರಕ್ಷಿತ ಸ್ಥಳಕ್ಕೆ ಸಾಗಿಸುವ ಬಗ್ಗೆ ತಾಲೂಕಾಡಳಿತವು ಅಗತ್ಯ ಕ್ರಮ ಕೈಗೊಳ್ಳತಕ್ಕದ್ದು. ಈ ಸಮಯದಲ್ಲಿ ಜಿಲ್ಲೆಯ ಎಲ್ಲಾ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಎಲ್ಲಾ ತಾಲೂಕಿನ ನೋಡಲ್ ಅಧಿಕಾರಿಗಳು ಕೇಂದ್ರಸ್ಥಾನದಲ್ಲಿದ್ದು ಕರ್ತವ್ಯ ನಿರ್ವಹಿಸುವಂತೆ ಅವರು ಮಾಹಿತಿ ನೀಡಿದ್ದಾರೆ.

RELATED ARTICLES  ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಹಾಗೂ ಮೆಡಿಕಲ್ ಕಾಲೇಜು ಸ್ಥಾಪನೆಗೆ ಒತ್ತಾಯಿಸಿ ಪಾದಯಾತ್ರೆ. : ಅನಂತಮೂರ್ತಿ ಹೆಗಡೆ ನೇತ್ರತ್ವದಲ್ಲಿ ನಾಳೆಯಿಂದ ಪ್ರಾರಂಭ.

ಸಾರ್ವಜನಿಕರು, ಮೀನುಗಾರರು ಹಾಗೂ ಪ್ರವಾಸಿಗರು ಅಗತ್ಯ ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳಲು ಕೋರಲಾಗಿದೆ. ಮೀನುಗಾರರು ಈ ಸಂದರ್ಭದಲ್ಲಿ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ವಹಿಸಲು ಮೀನುಗಾರಿಕೆ ಇಲಾಖೆಗೆ ತಿಳಿಸಲಾಗಿದೆ.

RELATED ARTICLES  ಬಾಲಮಂದಿರ ಆವರಣದಲ್ಲಿ ಮಗುವನ್ನು ಬಿಟ್ಟುಹೋದ ಪಾಲಕರು..!

ಮಳೆ-ಗಾಳಿ ಬೀಸುವ ಸಂದರ್ಭದಲ್ಲಿ ಮಕ್ಕಳು/ಸಾರ್ವಜನಿಕರು ಅಪಾಯಕಾರಿ ವಿದ್ಯುತ್ ಕಂಬ, ಕಟ್ಟಡ, ಮರಗಳ ಹತ್ತಿರ ಹಾಗೂ ಕಳಗೆ ನಿಲ್ಲದೇ, ಸುರಕ್ಷಿತ ಸ್ಥಳಗಳಲ್ಲಿ ಆಶ್ರಯ ಪಡೆಯುವಂತೆ ಮಾಹಿತಿ ನೀಡಲಾಗಿದೆ.