ಅಂಕೋಲಾ : ಯುವಕನೊಬ್ಬ ಗದ್ದೆಯಲ್ಲಿ ನಾಟಿ ಕೆಲಸ ಮುಗಿಸಿ ಕಾಲು ದಾರಿಯಲ್ಲಿ ಬರುತ್ತಿದ್ದ ಸಂದರ್ಭದಲ್ಲಿ ಆಕಸ್ಮಿಕವಾಗಿ ಕಾಲು ಜಾರಿ ಹಳ್ಳಕ್ಕೆ ಬಿದ್ದು ನೀರಿನಲ್ಲಿ ಕೊಚ್ಚಿ ಹೋದ ಘಟನೆ ವರದಿಯಾಗಿದೆ. ಮನೆಗೆ ಆಸರೆಯಾಗಿದ್ದ ಯುವಕನನ್ನು ಕಳೆದುಕೊಂಡ ಕುಟುಂಬ ದುಃಖದಲ್ಲಿದೆ.

ತಾಲೂಕಿನ ಬಾಳೇಗುಳಿ ನಿವಾಸಿ ಸುನೀಲ ಶಂಕರ ಗೌಡ ಮೃತ ದುರ್ದೈವಿಯಾಗಿದ್ದು, ಈತ ಬೊಗ್ರಿಬೈಲ್ ನಲ್ಲಿ ಇರುವ ಗದ್ದೆಯಲ್ಲಿ ಕೆಲಸ ಮುಗಿಸಿ ಬರುವಾಗ ಈ ದುರ್ಘಟನೆ ಸಂಭವಿಸಿದೆ. ಕೊಚ್ಚಿ ಹೋಗಿದ್ದ ಆತನ ಶವ ಸ್ವಲ್ಪ ದೂರದಲ್ಲಿ ಪತ್ತೆಯಾಗಿದೆ.

RELATED ARTICLES  ಸಂಬಂಧಿಕರೇ ಯುವತಿಯನ್ನು ಅಪಹರಿಸಿದರೇ? ಮತ್ತೆ ದಾಖಲಾಯ್ತು ಪ್ರಕರಣ.

ಅಂಕೋಲಾ ತಹಶೀಲ್ದಾರ ಉದಯ ಕುಂಬಾರ, ಕಂದಾಯ ನಿರೀಕ್ಷಕ ಸಂತೋಷ ಯಳಗದ್ದೆ, ಪಿ ಎಸ್ ಐ ಮಹಾಂತೇಶ ವಾಲ್ಮೀಕಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಸ್ಥಳೀಯರು ನೀರಿನಿಂದ ಮೃತ ದೇಹವನ್ನು ಮೇಲೆತ್ತಿದರು.

RELATED ARTICLES  ಚಿತ್ರಿಗಿ ಮಹಾತ್ಮಾ ಗಾಂಧಿ ಪ್ರೌಢಶಾಲೆಯಲ್ಲಿ ಸರ್ವೆಪಲ್ಲಿ ರಾಧಾಕೃಷ್ಣನ್ ಜನ್ಮದಿನಾಚರಣೆ

ಘಟನೆಯ ಕುರಿತಂತೆ ಮೃತನ ಸಹೋದರ ಸಂದೀಪ ಗೌಡ ದೂರು ನೀಡಿದ್ದು ಅಂಕೋಲಾ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.