ಕಾಮನ್ ವೆಲ್ತ್ ಗೇಮ್ಸ್‌ನ ಬ್ಯಾಡ್ಮಿಂಟನ್
ನಲ್ಲಿ ಪುರುಷರ ಡಬಲ್ಸ್‌ನಲ್ಲಿ ಭಾರತದ ಸಾತ್ವಿಕ್
ಸಾಯಿರಾಜ್ ರಾಂಕಿರೆಡ್ಡಿ ಮತ್ತು ಚಿರಾಗ್ ಶೆಟ್ಟಿ ಚಿನ್ನ ಗೆದ್ದಿದ್ದಾರೆ ಎಂದು ತಿಳಿದುಬಂದಿದೆ.
ಅಚಂತಾ ಶರತ್ ಕಮಲ್ ರವರು ಟೇಬಲ್ ಟೆನಿಸ್ ಸಿಂಗಲ್ಸ್ ಸ್ಪರ್ಧೆಯಲ್ಲಿ ಬ್ರಿಟಿಷ್ ಪ್ಯಾಡ್ಲರ್ ಲಿಯಾಮ್ ಪಿಚ್‌ಫೋರ್ಡ್
ಅವರನ್ನು 4-1 ರಿಂದ ಸೋಲಿಸಿ ಚಿನ್ನವನ್ನು ಪಡೆದರು ಎನ್ನಲಾಗಿದೆ.
ಈ ಮೂಲಕವಾಗಿ ಭಾರತಕ್ಕೆ 21ನೇ ಚಿನ್ನದ ಪದಕ ಬಂದಂತಾಗಿದೆ.ಕಾಮನ್‌ವೆಲ್ತ್ ಗೇಮ್ಸ್‌ನ ಕೊನೆಯ ದಿನ ಭಾರತ ಬ್ಯಾಡ್ಮಿಂಟನ್‌ನಲ್ಲಿ ಮೂರು ಚಿನ್ನದ ಪದಕವನ್ನು ಗೆದ್ದುಕೊಂಡಿದೆ ಎಂದು ತಿಳಿದುಬಂದಿದೆ.
ಮಹಿಳೆಯರ ಸಿಂಗಲ್ಸ್‌ನಲ್ಲಿ ಪಿವಿ ಸಿಂಧು
ಮತ್ತು ಪುರುಷರ ಸಿಂಗಲ್ಸ್‌ನಲ್ಲಿ ಲಕ್ಷ್ಯ ಸೇನ್ ಮತ್ತು ಪುರುಷರ ಡಬಲ್ಸ್‌ನಲ್ಲಿ ಸಾತ್ವಿಕ್ ಸಾಯಿರಾಜ್ ರಂಕಿರೆಡ್ಡಿ ಮತ್ತು ಚಿರಾಗ್ ಶೆಟ್ಟಿ ಜೋಡಿ ಚಿನ್ನದ ಪದಕ ಜಯಿಸಿದ್ದಾರೆ ಎಂದು ವರದಿಯಾಗಿದೆ.