ಕುಮಟಾ : ಪ್ರತಿಭಾವಂತ ವಿದ್ಯಾರ್ಥಿಗಳನ್ನು ಪುರಸ್ಕರಿಸುವ ಮೂಲಕ ಇನ್ನಷ್ಟು ಸಾಧನೆಗೆ ಪ್ರೇರಣೆ ನೀಡುವ ಕಾರ್ಯ ಗ್ಲೋಬಲ್ ನಾಮಧಾರಿ ಸಂಘ ಮಾಡಿರುವುದು ನಿಜಕ್ಕೂ ಶ್ಲಾಘನೀಯ ಎಂದು ಡಿಡಿಪಿಐ ಈಶ್ವರ ನಾಯ್ಕ ಹೇಳಿದರು. ಅವರು ರವಿವಾರ ಪಟ್ಟಣದ ನಾಮಧಾರಿ ಸಭಾಭವನದಲ್ಲಿ ಗ್ಲೋಬಲ್ ನಾಮಧಾರಿ ಸಂಘ ಮತ್ತು ಸಮುದಾಯ ಸಂಘಗಳ ಸಹಕಾರದಲ್ಲಿ ಪ್ರತಿಭಾ ಪುರಸ್ಕಾರ ಮತ್ತು ಗೌರವ ಸಮರ್ಪಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಜಿಲ್ಲಾ ನಾಮಧಾರಿ ಸಂಘದ ಅಧ್ಯಕ್ಷ ಮಂಜುನಾಥ ಎಲ್ ನಾಯ್ಕ, ಜಿಪಂ ಮಾಜಿ ಸದಸ್ಯ ರತ್ನಾಕರ ನಾಯ್ಕ ಹಾಗೂ ಜೆಡಿಎಸ್ ಮುಖಂಡ ಸೂರಜ ನಾಯ್ಕ ಸೋನಿ ಮಾತನಾಡಿ, ಶಿಕ್ಷಣದಲ್ಲಿ ಸಾಧನೆ ಮಾಡಿದ ವ್ಯಕ್ತಿ ಉನ್ನತ ಸ್ಥಾನ ಪಡೆಯಲು ಸಾಧ್ಯ. ನಾಮಧಾರಿ ಸಂಘದಿAದ ಪುರಸ್ಕಾರ ಪಡೆದ ವಿದ್ಯಾರ್ಥಿಗಳು ಮುಂದಿನ ದಿನಗಳಲ್ಲಿ ಉನ್ನತ ಸ್ಥಾನಕ್ಕೇರಿದಾಗ ನಿಮ್ಮಿಂದಲ್ಲೂ ಇತರೆ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಸಹಕಾರ ನೀಡುವ ಕಾರ್ಯವಾಗಬೇಕು. ಅಲ್ಲದೇ ನಮ್ಮ ಮಕ್ಕಳು ಈ ಜಿಲ್ಲೆಯ ಆಡಳಿತದ ಚುಕ್ಕಾಣಿ ಹಿಡಿಯಬೇಕು. ಡಿಸಿ, ಎಸಿ, ಜಿಪಂ ಸಿಇಒ ಹೀಗೆ ಉನ್ನತ ಹುದ್ದೆಗಳನ್ನು ಅಲಂಕರಿಸುವ ಮೂಲಕ ಸಮಾಜವನ್ನು ಅಭಿವೃದ್ಧಿ ಪಥದಲ್ಲಿ ಕೊಂಡೊಯ್ಯಬೇಕು. ಆ ನಿಟ್ಟಿನಲ್ಲಿ ನಮ್ಮೆಲ್ಲ ಪ್ರತಿಭಾವಂತ ವಿದ್ಯಾರ್ಥಿಗಳು ಪ್ರಯತ್ನಿಸಬೇಕು ಎಂದರು.

RELATED ARTICLES  ರವೀಂದ್ರ ಭಟ್ಟ ಸೂರಿಯವರಿಗೆ ಹುಟ್ಟೂರಿನಲ್ಲಿ ಅಭಿಮಾನದ ಸನ್ಮಾನ

ನಿವೃತ್ತ ಅಧೀನ ಕಾರ್ಯದರ್ಶಿ ವಸಂತ ಎನ್ ನಾಯ್ಕ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ೬೦೦ಕ್ಕೂ ಅಧಿಕ ಅಂಕ ಪಡೆದ ಮತ್ತು ಪಿಯುಸಿ ಪರೀಕ್ಷೆಯಲ್ಲಿ ೫೭೫ಕ್ಕಿಂತ ಅಧಿಕ ಅಂಕ ಪಡೆದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಪುರಸ್ಕರಿಸಲಾಯಿತು. ಸ್ವಾತಂತ್ರö್ಯ ಹೋರಾಟಗಾರರ ಕುಟುಂಬದ ಶಂಕರ ಎನ್ ನಾಯ್ಕ ಮತ್ತು ಡಾ ಅಶೋಕ ನಾಯ್ಕ ಅವರನ್ನು ಸನ್ಮಾನಿಸಲಾಯಿತು. ಜ್ಞಾನ ವಿಕಾಸ ಮಂದಿರದ ಸಂಸ್ಥಾಪಕ ಎನ್ ಬಿ ನಾಯ್ಕ ಅವರನ್ನು ಗೌರವಿಸಲಾಯಿತು.

RELATED ARTICLES  ಭಟ್ಕಳದ ಶ್ರೀ ಗುರು ಸುಧೀಂದ್ರ ಕಾಲೇಜಿನಲ್ಲಿ 'ಪಾಲಕರ ಸಮಾಗಮ ಕಾರ್ಯಕ್ರಮ'

ವಕೀಲ ಆರ್ ಜಿ ನಾಯ್ಕ, ನಾಮಧಾರಿ ಸಂಘದ ತಾಲೂಕಾಧ್ಯಕ್ಷ ಮಂಜುನಾಥ ನಾಯ್ಕ ಕೋಡ್ಕಣಿ, ಯುವ ನಾಮಧಾರಿ ಅಧ್ಯಕ್ಷ ವಿನಾಯಕ ನಾಯ್ಕ, ನೌಕರರ ಸಂಘದ ಅಧ್ಯಕ್ಷ ಎನ್ ಆರ್ ನಾಯ್ಕ, ಮಹಿಳಾ ಸಂಘದ ಅಧ್ಯಕ್ಷೆ ಭಾರತಿ ನಾಯ್ಕ, ಹುಬ್ಬಳ್ಳಿ-ಧಾರವಾಡ ನಾಮಧಾರಿ ಸಂಘದ ಅಧ್ಯಕ್ಷ ಟಿ ಡಿ ನಾಯ್ಕ, ಸುಬ್ರಾಯ ನಾಯ್ಕ ಸಾರದಾಹೊಳೆ, ದಾಂಡೇಲಿ ಅಧ್ಯಕ್ಷ ಜಿ ಪಿ ನಾಯ್ಕ ಇತರಿದ್ದರು. ಗ್ಲೋಬಲ್ ನಾಮಧಾರಿ ಸಂಘದ ಕಾರ್ಯದರ್ಶಿ ಆರ್ ಐ ನಾಯ್ಕ ಸ್ವಾಗತಿಸಿದರು. ಶಿಕ್ಷಕ ಮಂಜುನಾಥ ನಾಯ್ಕ ನಿರೂಪಿಸಿ, ನಾಮಧಾರಿ ಸಂಘದ ಕಾರ್ಯದರ್ಶಿ ರಾಘವೇಂದ್ರ ನಾಯ್ಕ ವಂದಿಸಿದರು.