ಹೊನ್ನಾವರ : ತಾಲೂಕಿನ ಗೇರುಸೊಪ್ಪಾ ಸರ್ಕಲ್ ಬಳಿ ಚಾಲಕನ ನಿಯಂತ್ರಣ ತಪ್ಪಿ ತುಂಬಿದ ಗ್ಯಾಸ್ ಟ್ಯಾಂಕರ್ ಪಲ್ಟಿಯಾಗಿರುವ ಘಟನೆ ವರದಿಯಾಗಿದೆ. ಘಟನೆಯಿಂದಾಗಿ ಸ್ಥಳದಲ್ಲಿ ಗೊಂದಲದ ವಾತಾವರಣ ನಿರ್ಮಾಣವಾಗಿದೆ. ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ ರಕ್ಷಣಾ ಕಾರ್ಯದಲ್ಲಿ ತೊಡಗಿದ್ದಾರೆ. ಅದ್ಯಾವುದೋ ಕಾರಣಕ್ಕೆ ಚಾಲಕನಾ ನಿಯಂತ್ರಣದ ಪಿ ಗ್ಯಾಸ್ ಟ್ಯಾಂಕರ್ ಪಟ್ಟಿಯಾಗಿದೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.

RELATED ARTICLES  ಬೈಕ್ ಮತ್ತು ಟ್ಯಾಂಕರ್ ನಡುವೆ ಅಪಘಾತ : ಧಾರುಣ ಸಾವು ಕಂಡ ಬೈಕ್ ಸವಾರ

ಅಪಘಾತದಿಂದಾಗಿ ಗ್ಯಾಸ್ ಟ್ಯಾಂಕರ್ ಚಾಲಕ ಮತ್ತು ಕ್ಲೀನರ್ ಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆಂದು ಸ್ಥಳೀಯ ಮಾಹಿತಿ ಲಭ್ಯವಿದೆ. ಗ್ಯಾಸ್ ಟ್ಯಾಂಕರ್ ಆಗಿರುವ ಕಾರಣ ಅನಿಲ ಸೋರಿಕೆ ಆಗಬಹುದೆಂಬ ಕಾರಣಕ್ಕೆ ಸುತ್ತಮುತ್ತಲ ಜನ ಭಯಗೊಂಡಿದ್ದಾರೆ. ಮಳೆಯ ಕಾರಣದಿಂದಾಗಿ ಟ್ಯಾಂಕರ್ ಚಾಲಕನ ನಿಯಂತ್ರಣ ತಪ್ಪಿ ಸ್ಕಿಡ್ ಆಗಿ ಬಿದ್ದಿರಬೇಕೆಂದು ಅಂದಾಜಿಸಲಾಗಿದೆ.

RELATED ARTICLES  ಇಂದು ಉತ್ತರ ಕನ್ನಡ ಜಿಲ್ಲೆಯಲ್ಲಿ 59 ಮಂದಿಗೆ ಕೊರೋನಾ ಪಾಸಿಟೀವ್

ಘಟನೆಯಿಂದಾಗಿ ಹೊನ್ನಾವರ ಕಾರವಾರ ಶಿರಸಿ ಗೇರುಸೊಪ್ಪಾ ಮಾರ್ಗ ಬಂದ್ ಆಗಿದೆ ಎನ್ನಲಾಗಿದೆ. ಸ್ಥಳಕ್ಕೆ ಅಧಿಕಾರಿಗಳು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿಗಳು ದೌಡಾಯಿಸಿದ್ದು ಹೆಚ್ಚಿನ ಮಾಹಿತಿ ಲಭ್ಯವಾಗಬೇಕಾಗಿದೆ.