ಶಿರಸಿ:ಮೂಲತಃ ಯಲ್ಲಾಪುರ ತಾಲೂಕಿನ ಬೊಮ್ಮನಳ್ಳಿಯವರಾದ ಡಾ. ಕೃಷ್ಣಮೂರ್ತಿ ಗಣಪತಿ ಭಟ್ಟ ಅವರನ್ನು ಹಂಪಿಯ ಕನ್ನಡ ವಿಶ್ವವಿದ್ಯಾಲಯದ ಸಂಗೀತ ಮತ್ತು ನೃತ್ಯ ವಿಭಾಗದ ಬಾಹ್ಯ ಪಿ.ಎಚ್.ಡಿ. ಮಾರ್ಗದರ್ಶಕರನ್ನಾಗಿ ನಿಯುಕ್ತಿಗೊಳಿಸಲಾಗಿದೆ. ಹಂಪಿ ವಿಶ್ವ ವಿದ್ಯಾಲಯದ ಕುಲಪತಿಗಳು 2022-23ನೇ ಸಾಲಿಗೆ ಈ ಆದೇಶವನ್ನು ಹೊರಡಿಸಿದ್ದಾರೆ.

RELATED ARTICLES  ಹೊನ್ನಾವರದಲ್ಲಿ ನಡೆಯುತ್ತಿರುವ ಉಚಿತ ಆರೋಗ್ಯ ತಪಾಸಣೆ ಹಾಗೂ ಉಚಿತ ಔಷಧ ವಿತರಣಾ ಶಿಬಿರಕ್ಕೆ ಉತ್ತಮ ಸ್ಪಂದನೆ

ಹೊನ್ನಾವರದ ಎಸ್.ಡಿ.ಎಂ. ಕಾಲೇಜಿನ ಸಂಗೀತ ವಿಭಾಗದ ಪ್ರಾಧ್ಯಾಪಕರಾದ ಶ್ರೀಯುತರು ಸದ್ಯ ಶಿರಸಿಯ ಎಂ.ಎ೦ ಕಲಾ ಮತ್ತು ವಿಜ್ಞಾನ ಮಹಾವಿದ್ಯಾಲಯದ ಸಂಗೀತ ಮತ್ತು ನೃತ್ಯ ವಿಭಾಗದ ಮುಖ್ಯಸ್ಥರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಖ್ಯಾತ ಗಾಯಕರೂ ಆದ ಶ್ರೀಯುತರ ಸಾಧನೆಗೆ ಕಾಲೇಜಿನ ಪ್ರಾಚಾರ್ಯರು, ಸಿಬ್ಬಂದಿ ವರ್ಗ, ಆಡಳಿತ ಮಂಡಳಿಯ ಅಧ್ಯಕ್ಷರು ಹಾಗೂ ಸದಸ್ಯರು ಹಾಗೂ ವಿದ್ಯಾರ್ಥಿಗಳು ಅಭಿನಂದಿಸಿದ್ದಾರೆ.

RELATED ARTICLES  ಶ್ರಾವಣಮಾಸದಲ್ಲಿ ಧಾರೇಶ್ವರದ ಶ್ರೀಧಾರಾನಾಥ ದೇವಸ್ಥಾನದಲ್ಲಿ ಈ ನಿಯಮ