ಶಿರಸಿ: ಉತ್ತರ ಕನ್ನಡ ಜಿಲ್ಲೆಯಲ್ಲಿ ಇದುವರೆಗೂ 4G ಸೇವೆ ಸಿಗದ 231 ಗ್ರಾಮಗಳಿಗೆ ಮುಂದಿನ ದಿನಗಳಲ್ಲಿ 4G ಸೇವೆ ಸಿಗಲಿದೆ ಎಂದು ಸಂಸದ ಅನಂತಕುಮಾರ ಹೆಗಡೆ ತಿಳಿಸಿದ್ದಾರೆ. ಜಿಲ್ಲೆಯಲ್ಲಿರುವ ಕೆಲವು ಮೊಬೈಲ್ ಟವರಗಳನ್ನು 3G ಯಿಂದ 4ಜಿ ಸೇವೆಗೆ ಉನ್ನತೀಕರಿಸಲು ಕೇಂದ್ರ ಸರಕಾರ ಒಪ್ಪಿಗೆ ಸೂಚಿಸಿದೆ. ಇದರಿಂದಾಗಿ ಜಿಲ್ಲೆಯ 231 ಗ್ರಾಮಗಳಿಗೆ 4G ಸೇವೆ ದೊರಕಲಿದೆ.

RELATED ARTICLES  ವೋಟರ್ ಐ.ಡಿ ಗೆ ಆಧಾರ್ ಲಿಂಕ್ ಮಾಡದಿದ್ರೆ ಏನಾಗುತ್ತೆ..?

ಗ್ರಾಮೀಣ ಪ್ರದೇಶದ ಜನ ಸಾಮಾನ್ಯರ ಬೇಡಿಕೆ ಹಾಗೂ ಸರಕಾರಿ ಸೇವೆಗಳನ್ನು ಪಡೆಯಲು ಮನೆಯಿಂದಲೇ ಅರ್ಜಿ ಸಲ್ಲಿಸಬಹುದು. ವಿದ್ಯಾರ್ಥಿಗಳಿಗೆ ಹಾಗೂ ಒನ್ ಲೈನ್ ಕೆಲಸ ಮಾಡುವ ಉದ್ಯೋಗಿಗಳಿಗೆ, ಪಡಿತರ ಅಂಗಡಿ ಮುಂತಾದ ಸರಕಾರಿ ಸೇವೆಗಳು ಗ್ರಾಮೀಣ ಪ್ರದೇಶದಲ್ಲಿ ಸುಲಭವಾಗಿ ದೊರಕಲಿದೆ.

RELATED ARTICLES  Google Chrome ಬಳಕೆದಾರರಿಗೆ ಹೊಸ ಅಪ್ಡೇಟ್

ಇದರ ಜೊತೆಗೆ ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಇನ್ನೂ ಉತ್ತಮ ಗುಣಮಟ್ಟದ 4G ಸೇವೆ ನೀಡಲು ಸಹ ಹೆಚ್ಚಿನ ಒತ್ತು ನೀಡಲಾಗುತ್ತಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.