ಕುಮಟಾ : ಸಂಪನ್ಮೂಲಗಳು ಮನುಷ್ಯನ ಅಗತ್ಯತೆಯನ್ನು ಪೂರೈಸುತ್ತದೆ. ಸಂಪನ್ಮೂಲಗಳ ಸದ್ಭಳಕೆಯಾದಾಗ ದೇಶದ ಅಭಿವೃದ್ಧಿಯೂ ಸಾಧ್ಯ. ಇಂದು ಭಾರತದಲ್ಲಿ ಸಾಕಷ್ಟು ಸಂಪನ್ಮೂಲಗಳಿವೆ ಅದನ್ನು ಸಮರ್ಪಕವಾಗಿ ಬಳಸಿಕೊಂಡಾಗ ಮಾತ್ರ ದೇಶದ ಸರ್ವತೋಮುಖ ಪ್ರಗತಿ ಸಾದ್ಯ ಎಂದು ವಿದ್ಯಾನಿಕೇತನ ಮೂರೂರು-ಕಲ್ಲಬ್ಬೆ ಸಂಸ್ಥೆಯ ಕಾರ್ಯಾಧ್ಯಕ್ಷರಾದ ಶ್ರೀ ಆರ್.ಜಿ.ಭಟ್ಟ ನುಡಿದರು. ಅವರು ಕುಮಟ ತಾಲೂಕಿನ ಮೂರೂರು ಪ್ರಗತಿ ವಿದ್ಯಾಲಯದಲ್ಲಿ ಆಜಾದಿಕಾ ಅಮೃತ್ ಮಹೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.
ಸ್ವಾತಂತ್ರ್ಯದ ಹೊಸ್ತಿಲಲ್ಲಿ ಭಾರತ ಸುಭೀಕ್ಷವಾಗಿರಲಿಲ್ಲ. ಆದರೆ ಇಂದು ನಮ್ಮ ದೇಶ ಎಲ್ಲಾ ರಂಗಗಳಲ್ಲಿ ಸಶಕ್ತವಾಗಿದೆ. ಅಭಿವೃದ್ಧಿ ಚಿಂತನೆಯಲ್ಲಿ ಒಳ್ಳೆಯ ಯೋಜನೆಗಳು ರೂಪುಗೊಳ್ಳುತ್ತಿವೆ. ಸೈನಿಕರು ದೇಶಕ್ಕೆ ಭದ್ರತೆಯನ್ನು ನೀಡಿರುವುದು ಹೆಮ್ಮೆಯ ಸಂಗತಿ. ಅಮ್ರತಮಹೋತ್ಸವದ ಈ ಶುಭ ಸಂದರ್ಭದಲ್ಲಿ ಹರ್ ಘರ್ ತಿರಂಗಾ ಮನೆ ಮನೆಗಳಲ್ಲಿ ರಾರಾಜಿಸುತ್ತಿದೆ. ಅಂತೆಯೇ ಶಾಲಾ ಕಾಲೇಜುಗಳಲ್ಲಿ ಅತ್ಯಂತ ವಿಜೃಂಬಣೆಯಿಂದ ಈ ದಿನವನ್ನು ಆಚರಿಸಲಾಗುತ್ತಿದೆ. ನಮ್ಮ ಶಾಲೆಯಲ್ಲಿಯೂ ಈ ದಿನ ಅತ್ಯಂತ ವೈಶಿಷ್ಟ್ಯಪೂರ್ಣವಾಗಿ ಆಚರಣೆಗೊಂಡಿರುವುದಕ್ಕೆ ಹರ್ಷ ವ್ಯಕ್ತಪಡಿಸಿದರು.
ಇದೇ ಸಂದರ್ಭದಲ್ಲಿ 75 ನೇ ಸ್ವಾತಂತ್ರ್ಯೋತ್ಸವದ ನಿಮಿತ್ತ 75 ತರೆಮರೆಯ ಸ್ವಾತಂತ್ರ್ಯ ಹೋರಾಟಗಾರರ ಸಾಧನೆಯನ್ನೊಳಗೊಂಡ ವ್ಯಕ್ತಿಚಿತ್ರ “NATION”S UNSUNG HEROES” ಪುಸ್ತಕ ಬಿಡುಗಡೆಗೊಳಿಸಲಾಯಿತು. ವಿದ್ಯಾರ್ಥಿಗಳನ್ನೊಳಗೊಂಡು ಎಲ್ಲರ ಸಹಕಾರದಿಂದ ಅನಾವರಣಗೊಂಡ ಪುಸ್ತಕ ಕ್ರಯಾಶೀಲತೆಗೆ ಮುನ್ನುಡಿ ಬರೆದಂತಿತ್ತು.
ಧ್ವಜಾರೋಹಣ ಸಂದರ್ಭದಲ್ಲಿ ಆಡಳಿತ ಮಂಡಳಿಯ ಸದಸ್ಯರು, ಪ್ರಾಚಾರ್ಯರು, ಮುಖ್ಯಾಧ್ಯಾಪಕರು, ಶಿಕ್ಷಕರು, ಶಿಕ್ಷಕೇತರ ಸಿಬ್ಬಂದಿಗಳು ವಿದ್ಯಾರ್ಥಿಗಳು, ಪಾಲಕ ಪೋಷಕರು, ಪೂರ್ವ ವಿದ್ಯಾರ್ಥಿಗಳು ಊರನಾಗರಿಕರು ಪಾಲ್ಗೊಂಡರು. ಸಿಹಿ ವಿತರಣೆಯ ನಂತರ ಸ್ಕೌಟ್ಸ್ ಮತ್ತು ಗೈಡ್ಸ ವಿದ್ಯಾರ್ಥಿಗಳಿಂದ ಪಥಸಂಚಲನ ನಡೆಯಿತು. ನಂತರ ನಡೆದ ಸಭಾಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಂದ ದೇಶಭಕ್ತಿ ಸಾರುವ ವೈವಿದ್ಯಮಯ ಕಾರ್ಯಕ್ರಮ ನಡೆಯಿತು.