ಕುಮಟಾ: ಜಿಲ್ಲಾ ಪಂಚಾಯತ ಉ.ಕ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉ.ಕ ಜಿಲ್ಲಾ ಶಿಕ್ಷಣ & ತರಬೇತಿ ಸಂಸ್ಥೆ ಕುಮಟಾ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಕುಮಟಾ ಇವರ ಸಂಯುಕ್ತಾಶ್ರಯದಲ್ಲಿ ನಡೆದ ತಾಲೂಕಾ ಮಟ್ಟದ ವಿಜ್ಞಾನ ವಿಚಾರಗೋಷ್ಟಿ ಜನತಾ ವಿದ್ಯಾಲಯ ಧಾರೇಶ್ವರದಲ್ಲಿ ನಡೆಯಿತು. ಸೆಕೆಂಡರಿ ಹೈಸ್ಕೂಲ್ ಹಿರೇಗುತ್ತಿಯ ವಿದ್ಯಾರ್ಥಿನಿ ಸುವರ್ಣ ಮಂಜುನಾಥ ಭಂಡಾರಕರ್ ಇವಳು ದ್ವಿತೀಯ ಸ್ಥಾನ ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಆಯ್ಕೆಯಾದ ವಿದ್ಯಾರ್ಥಿಗಳಿಗೆ ಹಾಗೂ ಮಾರ್ಗದರ್ಶಕ ಶಿಕ್ಷಕರಿಗೆ ಮಹಾತ್ಮಾಗಾಂಧೀ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ಹೊನ್ನಪ್ಪ ನಾಯಕ, ಉಪಾಧ್ಯಕ್ಷರಾದ ಶ್ರೀಕಾಂತ ನಾಯಕ, ಕಾರ್ಯದರ್ಶಿ ಮೋಹನ ಕೆರೆಮನೆ, ಸದಸ್ಯರು, ಮುಖ್ಯೋಪಾಧ್ಯಾಯರಾದ ರೋಹಿದಾಸ ಗಾಂವಕರ, ಶಿಕ್ಷಕ ವೃಂದದವರು ಅಭಿನಂದನೆ ಸಲ್ಲಿಸಿ ಮುಂದಿನ ಹಂತಕ್ಕೆ ಶುಭಹಾರೈಸಿದರು.
ವರದಿ: ಎನ್ ರಾಮು ಹಿರೇಗುತ್ತಿ