Home Special News ಟ್ಯಾಂಕರ್ ಹಾಗೂ ಲಾರಿ ನಡುವೆ ಅಪಘಾತ

ಟ್ಯಾಂಕರ್ ಹಾಗೂ ಲಾರಿ ನಡುವೆ ಅಪಘಾತ

ಯಲ್ಲಾಪುರ: ಟ್ಯಾಂಕರ್ ಹಾಗೂ ಲಾರಿ ನಡುವೆ ಅಪಘಾತ ಸಂಭವಿಸಿ ಲಾರಿ ಪಲ್ಟಿಯಾದ ಘಟನೆ ರಾಷ್ಟ್ರೀಯ ಹೆದ್ದಾರಿ 63 ರಲ್ಲಿ ತಾಲೂಕಿನ ಮಾವಳ್ಳಿ ಕ್ರಾಸ್ ಬಳಿ ನಡೆದಿದೆ.

ಹುಬ್ಬಳ್ಳಿಯಿಂದ ಕಾರವಾರ ಕಡೆಗೆ ಹೊರಟಿದ್ದ ಟ್ಯಾಂಕರ್, ಯಲ್ಲಾಪುರ ಕಡೆಯಿಂದ ಮಹಾರಾಷ್ಟ್ರಕ್ಕೆ ಹೊರಟಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ. ಲಾರಿ ಪಲ್ಟಿಯಾಗಿ ಲಾರಿಯಲ್ಲಿದ್ದ ಪ್ಲೈವುಡ್ ಗಳು ರಸ್ತೆಯ ಮೇಲೆ ಬಿದ್ದಿವೆ.

ಚಾಲಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಹೆದ್ದಾರಿ ಮಧ್ಯೆ ಲಾರಿ ಬಿದ್ದಿರುವ ಕಾರಣಕ್ಕೆ ಕೆಲಕಾಲ ವಾಹನಗಳ ಸಂಚಾರ ಸ್ಥಗಿತಗೊಂಡಿತ್ತು. ಸ್ಥಳಕ್ಕೆ ಬಂದ ಪೊಲೀಸರು ಪಲ್ಟಿಯಾದ ಲಾರಿ ತೆರವುಗೊಳಿಸಲು ಕ್ರಮ ಕೈಗೊಂಡು ವಾಹನಗಳ ಸಂಚಾರಕ್ಕೆ ಅನುವು ಮಾಡಿಕೊಟ್ಟರು.