ಯಲ್ಲಾಪುರ: ಕೆ.ಎಸ್.ಆರ್.ಟಿ.ಸಿ ಬಸ್ಸೊಂದು ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ ೬೩ ರ ಪಟ್ಟಣದ ಕೆ.ಮಿಲನ್ ಹೋಟೆಲ್ ಬಳಿ ನಡೆದಿದೆ. ಮೃತಪಟ್ಟ ಬೈಕ್ ಸವಾರ ಬಾಗಲಕೋಟೆಯ ಶಿವರಾಜ ಹುನಗುಂದ (೨೩) ಎಂದು ತಿಳಿದು ಬಂದಿದೆ.

RELATED ARTICLES  ಈ ರಾಶಿಯವರಿಗೆ ಕೌಟುಂಬಿಕ ಸಮಸ್ಯೆ...! ಈ ರಾಶಿಯವರಿಗೆ ಇಂದಿನ ದಿನ ಶುಭಪ್ರದ...! ಹಾಗಾದರೆ ನಿಮ್ಮ ರಾಶಿಯ ಇಂದಿನ ದಿನದ ಫಲಾಫಲ ಇಲ್ಲಿದೆ.


ಯಲ್ಲಾಪುರದಿಂದ ಹುಬ್ಬಳ್ಳಿ ಕಡೆಗೆ ಹೊರಟಿದ್ದ ಬಸ್, ಲಾರಿಯನ್ನು ಓವರ್ ಟೇಕ್ ಮಾಡುವ ಭರದಲ್ಲಿ ಎದುರಿನಿಂದ ಬರುತ್ತಿದ್ದ ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ, ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಬೈಕ್ ಸಂಪೂರ್ಣ ನುಜ್ಜುಗುಜ್ಜಾಗಿದ್ದು, ಬಸ್‌ನ ಮುಂಭಾಗ ಜಖಂಗೊAಡಿದೆ. ಬಸ್ ನಲ್ಲಿ ೪೦ ಕ್ಕೂ ಹೆಚ್ಚು ಪ್ರಯಾಣಿಕರಿದ್ದು, ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಾಳುಗಳನ್ನು ಯಲ್ಲಾಪುರದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು ಈ ಕುರಿತು ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

RELATED ARTICLES  ಶರಾವತಿ ಸೇತುವೆಯ ಮೇಲೆ ಅಪಘಾತ : ಇಬ್ಬರಿಗೆ ಪೆಟ್ಟು.